ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ (West Bengal Elections 2026) ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು ನಡೆದಿದೆ.
ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್ದಾಳಿ (Crude Bomb Attack) ನಡೆಸಿದ್ದಾರೆ. ಜಿಲ್ಲೆಯ ನೌಡಾದಲ್ಲಿ ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಇದು ಸ್ಥಳೀಯರಲ್ಲಿ ಭೀತಿ ಹೆಚ್ಚಿಸಿದೆ.
ಕಚ್ಚಾ ಬಾಂಬ್ ದಾಳಿಯ ಬಳಿಕ ಹಿಂಸಾಚಾರ ಪೀಡಿತವಾಗಿರುವ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್ ಟೈಂ ವೋಟರ್ಸ್ ಹಕ್ಕು ಚಲಾವಣೆ

ಕಳೆದ ತಿಂಗಳು, ಜಿಲ್ಲೆಯ ಜಂಗಿಪುರ ಮತ್ತು ರಘುನಾಥಗಂಜ್ ಪ್ರದೇಶಗಳಲ್ಲಿ ಎರಡು ಗುಂಪುಗಳ ನಡುವೆ ಭಾರೀ ಘರ್ಷಣೆ ನಡೆದಿತ್ತು. ಇದರಿಂದಾಗಿ ಅಧಿಕಾರಿಗಳು ನಿಷೇಧಾಜ್ಞೆ ಹೊರಡಿಸಿ 30 ಜನರನ್ನ ಬಂಧಿಸಲಾಗಿತ್ತು. ಅಂದಿನಿಂದಲೂ ಕೇಂದ್ರ ಪಡೆಗಳು ಸಹ ಈ ಸ್ಥಳದ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿವೆ.
ಮೊದಲ ಹಂತದ ಚುನಾವಣೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಬಂಗಾಳದ ಎಲ್ಲಾ 152 ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದೆ. ಉತ್ತರ ಬಂಗಾಳದ ಮುರ್ಷಿದಾಬಾದ್, ಜರ್ಗಾಮ, ಮೇದಿನಿಪುರ, ಬಂಕುರಾ, ಪುರುಲಿಯಾ, ಪಶ್ಚಿಮ ಬರ್ಧಮಾನ್ ಮತ್ತು ಬಿರ್ಬುಮ್ನಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ.
ಮೊದಲ ಹಂತದಲ್ಲಿ 16 ಜಿಲ್ಲೆಗಳ 152 ಕ್ಷೇತ್ರಗಳಿದ್ದು, 1,478 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಹೆಚ್ಚುವರಿ 4,660 ಸಹಾಯಕ ಮತಗಟ್ಟೆಗಳನ್ನ ಸ್ಥಾಪಿಸಲಾಗಿದೆ. ಇದನ್ನೂ ಓದಿ: ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್ ಲೇಡಿ ಮಾಡಿದ್ದೇನು?
ಒಟ್ಟು ಮತಗಟ್ಟೆಗಳ ಪೈಕಿ 8,000 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ರಾಜ್ಯದಾದ್ಯಂತ 780 ಕ್ಕೂ ಹೆಚ್ಚು ಕೇಂದ್ರ ಭದ್ರತಾ ಪಡೆಗಳ ಕಂಪನಿಗಳು ನಿಯೋಜನೆ ಮಾಡಿದೆ. ಮತದಾನಕ್ಕೂ ಮುನ್ನ ಈಗಾಗಲೇ 199 ಕ್ಕೂ ಹೆಚ್ಚು ಗೂಂಡಾಗಳನ್ನು ಬಂಧಿಸಲಾಗಿದೆ.



