Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫ್ಲೈಟ್‌ನಲ್ಲಿ ಬಂದು BSNL ಸಮವಸ್ತ್ರ ಧರಿಸಿ ತಾಮ್ರದ ತಂತಿ ಕದಿಯುತ್ತಿದ್ದ ಹೈಟೆಕ್ ಖದೀಮರು ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫ್ಲೈಟ್‌ನಲ್ಲಿ ಬಂದು BSNL ಸಮವಸ್ತ್ರ ಧರಿಸಿ ತಾಮ್ರದ ತಂತಿ ಕದಿಯುತ್ತಿದ್ದ ಹೈಟೆಕ್ ಖದೀಮರು ಅರೆಸ್ಟ್‌

Bengaluru City

ಫ್ಲೈಟ್‌ನಲ್ಲಿ ಬಂದು BSNL ಸಮವಸ್ತ್ರ ಧರಿಸಿ ತಾಮ್ರದ ತಂತಿ ಕದಿಯುತ್ತಿದ್ದ ಹೈಟೆಕ್ ಖದೀಮರು ಅರೆಸ್ಟ್‌

Public TV
Last updated: April 24, 2026 3:25 pm
Public TV
Share
2 Min Read
Hi tech thieves arrested for stealing copper wire while wearing BSNL uniforms bengaluru Police
SHARE

ಬೆಂಗಳೂರು: ವಿಮಾನದಲ್ಲಿ ಆಗಮಿಸಿ  ಎಸ್‌ಎನ್‌ಎಲ್‌ನ (BSNL) ಲಕ್ಷಾಂತರ ರೂಪಾಯಿ ಮೌಲ್ಯದ ತಾಮ್ರದ ತಂತಿಗಳನ್ನು(Copper Wire) ಕಳ್ಳತನ ಮಾಡುತ್ತಿದ್ದ ಉತ್ತರ ಪ್ರದೇಶ (Uttar Pradesh) ಮೂಲದ ಅಂತರಾಜ್ಯ ಕಳ್ಳರ ತಂಡವನ್ನು ಯಶವಂತಪುರ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ.

ಬಂಧಿತರನ್ನು ಉತ್ತರ ಪ್ರದೇಶದ ನಿವಾಸಿಗಳಾದ ರವಿ ಚವ್ಹಾಣ್, ಸಂದೀಪ್ ಮತ್ತು ಸೈಯದ್ ಜಾಹೇದ್ ಎಂದು ಗುರುತಿಸಲಾಗಿದೆ. ಇವರು ಕೇವಲ ಬೆಂಗಳೂರು (Bengaluru) ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಲ್ಲಿ ಇದೇ ಮಾದರಿಯ ಕಳ್ಳತನ (Theft) ನಡೆಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಸಾರ್ವಜನಿಕರಿಗೆ ಅನುಮಾನ ಬರದಂತೆ ಬಿಎಸ್‌ಎನ್‌ಎಲ್ ನೌಕರರು ಧರಿಸುವ ಮಾದರಿಯಲ್ಲೇ ವಿಶೇಷ ನೀಲಿ ಬಣ್ಣದ ಸಮವಸ್ತ್ರ ಹೊಲಿಸಿಕೊಂಡಿದ್ದರು. ಬಿಎಸ್‌ಎನ್‌ಎಲ್ ಟೆಲಿಫೋನ್ ಎಕ್ಸ್‌ಚೇಂಜ್‌ಗಳು ಮತ್ತು ರಸ್ತೆ ಬದಿಯ ಫುಟ್‌ಪಾತ್‌ಗಳಲ್ಲಿರುವ ಇಂಟರ್ನೆಟ್ ಬಾಕ್ಸ್‌ಗಳ ಬಳಿ ರಿಪೇರಿ ಮಾಡುವ ನೆಪದಲ್ಲಿ ಹೋಗುತ್ತಿದ್ದರು.

ಪಿಕಾಸಿ, ಸುತ್ತಿಗೆ, ಸ್ಕ್ರೂಡ್ರೈವರ್ ಮತ್ತು ಕಟ್ಟರ್ ಬಳಸಿ ಕಬ್ಬಿಣದ ಕಂಬಗಳನ್ನು ಒಡೆದು, ಅದರೊಳಗಿನ ಬೆಲೆಬಾಳುವ ತಾಮ್ರದ ತಂತಿ(Copper Wire) ಮತ್ತು ಮಾಡ್ಯೂಲ್‌ಗಳನ್ನು ಎಗರಿಸುತ್ತಿದ್ದರು. ಇದನ್ನೂ ಓದಿ: ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ – ಹಂತಕಿಯ ಪ್ಲ್ಯಾನ್‌ ಕೇಳಿ ಪೊಲೀಸರೇ ಶಾಕ್

 

ರೈಲಿನಲ್ಲಿ ಸಾಗಾಟ:
ಈ ಗ್ಯಾಂಗ್ ಅತ್ಯಂತ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿತ್ತು.ಕಳ್ಳತನ ಮಾಡುವ ಉದ್ದೇಶದಿಂದಲೇ ಈ ತಂಡ ವಿಮಾನದ ಮೂಲಕ ಒಂದು ನಗರದಿಂದ ಮತ್ತೊಂದು ನಗರಕ್ಕೆ ಹಾರುತ್ತಿತ್ತು. ಬೆಂಗಳೂರಿಗೆ ಬಂದಿಳಿದ ಇವರು ಸದಾಶಿವನಗರ, ಮತ್ತಿಕೆರೆ, ಮಲ್ಲೇಶ್ವರಂ ಮತ್ತು ಯಶವಂತಪುರದಲ್ಲಿ ಜುಲೈ 17 ಮತ್ತು 19ರಂದು ಸರಣಿ ಕಳ್ಳತನ ನಡೆಸಿದ್ದರು. ಕಳ್ಳತನ ಮಾಡಿದ ನಂತರ ಕದ್ದ ಮಾಲನ್ನು ಪತ್ತೆಯಾಗದಂತೆ ರೈಲಿನ ಮೂಲಕ ಬೇರೆ ರಾಜ್ಯಗಳಿಗೆ ಸಾಗಿಸಿ ಪರಾರಿಯಾಗುತ್ತಿದ್ದರು.

ಪೊಲೀಸ್ ಕಾರ್ಯಾಚರಣೆ
ಸತತ ಕಳ್ಳತನದಿಂದ ಕಂಗೆಟ್ಟಿದ್ದ ಬಿಎಸ್‌ಎನ್‌ಎಲ್ ಸಿಬ್ಬಂದಿ ಯಶವಂತಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಜಾಲಾಡಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಸರ್ಕಾರಿ ಆಸ್ತಿಗೆ ಹಾನಿ ಮಾಡಿ, ಬೊಕ್ಕಸಕ್ಕೆ ನಷ್ಟ ಉಂಟುಮಾಡುತ್ತಿದ್ದ ಈ ‘ಫ್ಲೈಯಿಂಗ್ ಕಳ್ಳರ’ ಬಂಧನದಿಂದ ಬಿಎಸ್‌ಎನ್‌ಎಲ್ ಇಲಾಖೆ ನಿಟ್ಟುಸಿರು ಬಿಟ್ಟಿದೆ. ಸದ್ಯ ಆರೋಪಿಗಳನ್ನು ಜೈಲಿಗಟ್ಟಿರುವ ಪೊಲೀಸರು, ಈ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

TAGGED:bengalurubsnltheft
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Supreme Court 1
Court

ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ತೆರೆ ಎಳೆದ ಸುಪ್ರೀಂಕೋರ್ಟ್

Public TV
By Public TV
6 seconds ago
devendra fadnavis
Karnataka

ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ: ದೇವೇಂದ್ರ ಫಡ್ನವೀಸ್

Public TV
By Public TV
26 minutes ago
Election Commission
Latest

ಪ.ಬಂಗಾಳ ಚುನಾವಣೆ ವೇಳೆ ದುರ್ನಡತೆ – ಐವರು ಪೊಲೀಸ್ ಅಧಿಕಾರಿಗಳನ್ನ ಅಮಾನತುಗೊಳಿಸಿ ಶಿಸ್ತು ಕ್ರಮಕ್ಕೆ ನಿರ್ದೇಶಿಸಿದ EC

Public TV
By Public TV
34 minutes ago
a huge tree fell in front of a moving car in aldur chikkamagaluru
Chikkamagaluru

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ – ಪ್ರಯಾಣಿಕರು ಜಸ್ಟ್‌ ಮಿಸ್‌

Public TV
By Public TV
57 minutes ago
We are not blackmailing we are demanding our rights Mandya Muslim clerics stern warning to Congress
Districts

ಅಧಿಕಾರಕ್ಕೆ ತಂದ ನಮಗೆ ನಿಮ್ಮನ್ನು ಕೆಳಗಿಳಿಸುವುದು ಗೊತ್ತು- ಕಾಂಗ್ರೆಸ್‌ಗೆ ಮುಸ್ಲಿಂ ಧರ್ಮಗುರುಗಳ ಖಡಕ್ ವಾರ್ನಿಂಗ್

Public TV
By Public TV
1 hour ago
Chalavadi narayanaswamy
Bengaluru City

ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ಜನರಲ್ ಎಸ್‌ಸಿ ಎಂದು ಕರೆದರೆ ಅದು ಒಳಮೀಸಲಾತಿ ಹೇಗೆ ಆಗುತ್ತೆ: ಛಲವಾದಿ ಕಿಡಿ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?