-ಎದ್ನೋಬಿದ್ನೋ ಅಂತ ಓಡಿದ ಪ್ರವಾಸಿಗರು
ರಾಮನಗರ: ಕಾವೇರಿ ನದಿಯಲ್ಲಿ (Cauvery River) ಆಟವಾಡುತ್ತಿದ್ದ ಪ್ರವಾಸಿಗರ (Tourists) ಮೇಲೆ ಕಾಡಾನೆ ದಾಳಿ (Wild Elephant Attack) ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ನಡೆದಿದೆ.
ಕನಕಪುರ (Kanakapura) ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು ನದಿಗೆ ಬಂದ ಕಾಡಾನೆ ಏಕಾಏಕಿ ಪ್ರವಾಸಿಗರ ಮೇಲೆ ಎರಗಿದೆ. ಈ ವೇಳೆ ಪ್ರವಾಸಿಗರು ಸ್ಥಳದಿಂದ ಎದ್ನೋಬಿದ್ನೋ ಎಂದು ಓಡಿದ್ದಾರೆ. ಈ ವೇಳೆ ಓರ್ವ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ ಅಲ್ಲಿಂದ ಕಾಡಿನೊಳಗೆ ಕಾಲ್ಕಿತ್ತಿದೆ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಚುನಾವಣೆಗೆ ದುಡ್ಡಿಲ್ಲ: ಸುಪ್ರೀಂಗೆ GBA ಅಳಲು
ಕಾಡಾನೆ ದಾಳಿಯಲ್ಲಿ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂಟಿಸಲಗ ಪ್ರವಾಸಿಗರ ಮೇಲೆ ದಾಳಿ ಮಾಡುವ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬಿಎಂಟಿಸಿ ಎಲ್ಲಾ ಬಸ್ಗಳಲ್ಲಿ ಹೊಸ ಇಟಿಎಂ – ಡೈನಾಮಿಕ್ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ್ರೆ ಮಾತ್ರ ಟಿಕೆಟ್ ಜನರೇಟ್



