ಹಾವೇರಿ: ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ (Hangal Taluk Hospital) ಅಗ್ನಿ ಅವಘಡ (Fire Accident) ಸಂಭವಿಸಿದ್ದು 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆ ಹಾಗೂ ಉಪಕರಣಗಳು ಸುಟ್ಟು ಭಸ್ಮವಾಗಿವೆ.
ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಆಸ್ಪತ್ರೆಯ 2ನೇ ಮಹಡಿ ಹೊತ್ತಿ ಉರಿದಿದೆ. ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂ. ಮೌಲ್ಯದ ಔಷಧಿ, 50 ಲಕ್ಷ ರೂ. ಮೌಲ್ಯದ ಮಾತ್ರೆಗಳು, ವೈದ್ಯಕೀಯ ಉಪಕರಣಗಳು ಸೇರಿದಂತೆ ಸುಮಾರು ಒಂದು ಕೋಟಿ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಇದನ್ನೂ ಓದಿ: ಜಿಯೋ ಮಾರ್ಟ್ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿದ್ದ ಯಾವುದೇ ರೋಗಿಗಳಿಗೂ ತೊಂದರೆ ಆಗಿಲ್ಲ. ಸ್ಥಳಕ್ಕೆ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ. ಇದನ್ನೂ ಓದಿ: ದಾವಣಗೆರೆ | ಅಗ್ನಿ ಅವಘಡ – 320 ಕ್ವಿಂಟಲ್ ಮೆಕ್ಕೆ ಜೋಳ ಭಸ್ಮ



