ಹಾಸನ: ಇಲ್ಲಿನ (Hassan) ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ (Hostel) ರ‍್ಯಾಗಿಂಗ್ (Ragging) ವಿಚಾರಕ್ಕೆ ಸಿನಿಯರ್ ಹಾಗೂ ಜ್ಯೂನಿಯರ್ ವಿದ್ಯಾರ್ಥಿಗಳ (Students) ನಡುವೆ ಮಾರಾಮಾರಿ ನಡೆದಿದೆ.
ಹಾಸ್ಟೆಲ್‍ನಲ್ಲಿರುವ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಜ್ಯೂನಿಯರ್ ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಗಲಾಟೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇದನ್ನೂ ಓದಿ: ನೆಲಮಂಗಲ | ರ‍್ಯಾಗಿಂಗ್‌ಗೆ ಹೆದರಿ ಸೆಲ್ಫಿ ವೀಡಿಯೋ ಮಾಡಿಟ್ಟು ಕಾಲೇಜು ಟಾಪರ್ ಆತ್ಮಹತ್ಯೆ
ಹಲ್ಲೆಗೊಳಗಾದ ವಿದ್ಯಾರ್ಥಿಗಳು ಕಾಲೀಜಿನ ಡೀನ್ ನಟರಾಜ್ ಅವರಿಗೆ ದೂರು ನೀಡಿದ್ದಾರೆ. ವಿದ್ಯಾರ್ಥಿಗಳ ದೂರು ಆಧರಿಸಿ ತನಿಖೆಗೆ ಕಮಿಟಿ ರಚಿಸಲಾಗುವುದು. ಕಮಿಟಿ ನೀಡುವ ವರದಿ ಆಧರಿಸಿ ಕ್ರಮಕೈಗೊಳ್ಳಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದೆ.
ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾಲೇಜಿಗೆ ಪೊಲೀಸರು ಸಹ ಭೇಟಿ ನೀಡಿದ್ದಾರೆ. ಈ ಬಗ್ಗೆ ವಿದ್ಯಾರ್ಥಿಗಳು ಪೊಲೀಸರಿಗೆ ದೂರು ನೀಡಲು ಮುಂದೆ ಬಂದಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಕೈಕಾಲು ಕಟ್ಟಿ, ಕಂಪಾಸ್‌ನಿಂದ ಚುಚ್ಚಿ ಚಿತ್ರಹಿಂಸೆ – ನರ್ಸಿಂಗ್ ಕಾಲೇಜಿನಲ್ಲಿ ರ‍್ಯಾಗಿಂಗ್ ಕ್ರೂರತೆಯ ವಿಡಿಯೋ ವೈರಲ್

