ಬೆಂಗಳೂರು: ಸಿಲಿಕಾನ್ ಸಿಟಿಯ ಹಲವೆಡೆ ವರುಣನ ಸಿಂಚನವಾಗಿದೆ. ರಾಜ್ಯದಲ್ಲಿ ಏ.30ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಂಭವವಿದ್ದು, ಇಂದಿನಿಂದ ಏ.30ರವರೆಗೆ ಮಳೆಯಾಗುವ ಮುನ್ಸೂಚನೆಯಿದೆ. ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಸಂಜೆ ವೇಳೆ ಕೆಲ ಪ್ರದೇಶಗಳಲ್ಲಿ ಗುಡುಗು, ಮಿಂಚು ಹಾಗೂ 40-50 ಕಿ.ಮೀ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ಕೆಲವೆಡೆ ಆಲಿಕಲ್ಲು ಮಳೆಯಾಗುವ ಸಂಭವವಿದೆ. ಇದನ್ನೂ ಓದಿ:ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ
ಇಂದು (ಏ.28) ಸಂಜೆ ಬೆಂಗಳೂರಿನ ಬಾಣಸವಾಡಿ, ಕಲ್ಯಾಣನಗರ, ನಾಗವಾರ ಸುತ್ತಮುತ್ತ ತುಂತುರು ಮಳೆಯಾಗಿದೆ. ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಬಿಸಿಲಿನ ತಾಪಕ್ಕೆ ತತ್ತರಿಸಿದ ಜನತೆಗೆ ವರುಣ ತಂಪೆರೆದಿದ್ದಾನೆ. ಸಂಜೆಯಿಂದಲೇ ಮೋಡಕವಿದ ವಾತಾವರಣವಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

