ಬೆಂಗಳೂರು: ಸಂಜೆ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದಾರೆ.
ಮೃತಪಟ್ಟವರ ಪೈಕಿ ಕೆಲವರು ಫುಟ್ಪಾತ್ ಬಳಿ ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಮೃತಪಟ್ಟವರ ಪೈಕಿ ಪಾದಚಾರಿಗಳು ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಗೋಡೆ ಕುಸಿದ ಬೆನ್ನಲ್ಲೇ ಅಲ್ಲಿದ್ದ ಸಾರ್ವಜನಿಕರು ರಕ್ಷಣಾ ಕಾರ್ಯ ನಡೆಸಿ ಕೆಲವರನ್ನು ರಕ್ಷಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದುರಂತ ಹೇಗಾಯ್ತು?
ಹಳೆಯ ಗೋಡೆಗೆ ದೊಡ್ಡ ಟಾರ್ಪಲ್ ಹಾಕಿ ವ್ಯಾಪಾರ ಮಾಡುತ್ತಿದ್ದರು. ದಿಢೀರನೆ ಮಳೆ ಜೋರಾಗಿ ಸುರಿದ ಕಾರಣ ರಕ್ಷಣೆಗೆ ವ್ಯಾಪಾರಿಗಳು ಮತ್ತು ಪಾದಚಾರಿಗಳು ಟಾರ್ಪಲ್ ಆಡಿ ನಿಂತಿದ್ದಾರೆ. ಈ ವೇಳೆ ಬಿರುಗಾಳಿ ಸಹಿತ ಮಳೆಗೆ ಗೋಡೆ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
This Is A Breaking Story More Details Awaited

