Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ

Latest

ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ

Public TV
Last updated: May 1, 2026 8:09 am
Public TV
Share
3 Min Read
West Bengal Election mamata banerjee late night high drama election commission says strong room not open
SHARE

– ಇವಿಎಂ ಟ್ಯಾಂಪರಿಂಗ್‌ಗೆ ಸಂಚು – ಟಿಎಂಸಿ
– ಚುನಾವಣಾ ಪ್ರಕ್ರಿಯೆಯು ಪಾರದರ್ಶಕವಾಗಿದೆ – ಆಯೋಗ

ಕೋಲ್ಕತ್ತಾ: ಇವಿಎಂ ಯಂತ್ರಗಳನ್ನು(EVM Machine) ಇರಿಸಲಾಗಿರುವ ಸ್ಟ್ರಾಂಗ್ ರೂಮ್‌ಗಳನ್ನು(Strong Room) ಅಕ್ರಮವಾಗಿ ತೆರೆಯಲಾಗಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ತಡರಾತ್ರಿ ಪ್ರತಿಭಟನೆ ನಡೆಸಿದ್ದಾರೆ.

ತಾವು ಸ್ಪರ್ಧಿಸಿರುವ ಭವಾನಿಪುರ(Bhabanipur) ಕ್ಷೇತ್ರದ ಮತ ಎಣಿಕಾ ಕೇಂದ್ರವಾದ ಸಖಾವತ್ ಮೆಮೋರಿಯಲ್ ಸ್ಕೂಲ್ ಬಳಿ ಮಮತಾ ಬ್ಯಾನರ್ಜಿ ಅವರು ಸ್ವತಃ ಭೇಟಿ ನೀಡಿ ಸುಮಾರು ನಾಲ್ಕು ಗಂಟೆಗಳ ಕಾಲ ತಂಗಿದ್ದರು.

ಇವಿಎಂ ಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್‌ಗಳನ್ನು ಅಕ್ರಮವಾಗಿ ತೆರೆಯಲಾಗಿದೆ ಮತ್ತು ಅವುಗಳ ಟ್ಯಾಂಪರಿಂಗ್‌ಗೆ (Tampering) ಸಂಚು ರೂಪಿಸಲಾಗಿದೆ. ಸ್ಟ್ರಾಂಗ್ ರೂಮ್‌ ಒಳಗಡೆ ಅಪರಿಚಿತ ವ್ಯಕ್ತಿಗಳಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

ಈ ವೇಳೆ ಮಾತನಾಡಿದ ಮಮತಾ ಬ್ಯಾನರ್ಜಿ, ಇವಿಎಂಗಳನ್ನು ಕಾವಲು ಕಾಯಲು ಕಾರ್ಯಕರ್ತರು 24 ಗಂಟೆಗಳ ಕಾಲ ಜಾಗರೂಕರಾಗಿರಬೇಕು ಮತ್ತು ಮಾಧ್ಯಮಗಳಿಗೆ ಸಿಸಿಟಿವಿ ಪ್ರವೇಶವನ್ನು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಚಿವೆ ಶಶಿ ಪಂಜಾ ಮತ್ತು ಟಿಎಂಸಿ ವಕ್ತಾರ ಕುನಾಲ್ ಘೋಷ್ ಅವರು ಕೋಲ್ಕತ್ತಾದ ನೇತಾಜಿ ಇಂದೋರ್ ಸ್ಟೇಡಿಯಂ ಮತ್ತು ಖುದೀರಾಮ್ ಅನುಶೀಲನ್ ಕೇಂದ್ರದ ಹೊರಗೆ ರಾತ್ರಿಯಿಡೀ ಧರಣಿ ನಡೆಸಿದ್ದಾರೆ. ಇದನ್ನೂ ಓದಿ: 226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

VIDEO | Outside the strong room at Shekhawat Memorial School in South Kolkata, WB CM Mamata Banerjee says, “I have come here because there is a strong room here for EVMs, we found manipulations at many places, so when I saw it on TV, I thought I should visit, I came, but the… pic.twitter.com/EbDALbY12h

— Press Trust of India (@PTI_News) April 30, 2026

ಚುನಾವಣಾ ಆಯೋಗ ಹೇಳಿದ್ದೇನು?
ಈ ಎಲ್ಲಾ ಆರೋಪಗಳನ್ನು ತಳ್ಳಿಹಾಕಿರುವ ಭಾರತೀಯ ಚುನಾವಣಾ ಆಯೋಗ (ECI), ಸ್ಟ್ರಾಂಗ್ ರೂಮ್‌ಗಳು ಸಂಪೂರ್ಣ ಸುರಕ್ಷಿತವಾಗಿವೆ ಮತ್ತು ನಿಯಮದಂತೆಯೇ ಸೀಲ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಎಲ್ಲಾ ಇವಿಎಂ ಸ್ಟ್ರಾಂಗ್ ರೂಮ್‌ಗಳನ್ನು ಅಭ್ಯರ್ಥಿಗಳು, ಅವರ ಏಜೆಂಟರು ಮತ್ತು ಸಾಮಾನ್ಯ ವೀಕ್ಷಕರ ಸಮ್ಮುಖದಲ್ಲೇ ನಿಯಮಾನುಸಾರ ಸೀಲ್ ಮಾಡಲಾಗಿದೆ. ಸ್ಟ್ರಾಂಗ್ ರೂಮ್‌ಗಳು ಸುರಕ್ಷಿತವಾಗಿದ್ದು, ಯಾವುದೇ ಭದ್ರತಾ ಉಲ್ಲಂಘನೆಯಾಗಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (CEO) ಮನೋಜ್ ಅಗರ್ವಾಲ್ ತಿಳಿಸಿದ್ದಾರೆ.

ಟಿಎಂಸಿ ಹಂಚಿಕೊಂಡಿರುವ ವಿಡಿಯೋದಲ್ಲಿ ಕಂಡುಬಂದ ಚಟುವಟಿಕೆಯು ಇವಿಎಂಗಳಿಗೆ ಸಂಬಂಧಿಸಿದ್ದಲ್ಲ. ಅದು ಪೋಸ್ಟಲ್ ಬ್ಯಾಲೆಟ್‌ಗಳನ್ನು (Postal Ballots) ವಿಧಾನಸಭಾ ಕ್ಷೇತ್ರವಾರು ಪ್ರತ್ಯೇಕಿಸುವ ಸಾಮಾನ್ಯ ಪ್ರಕ್ರಿಯೆಯಾಗಿದ್ದು, ಇದು ಸ್ಟ್ರಾಂಗ್ ರೂಮ್‌ಗಳ ಹೊರಗಿನ ಕಾರಿಡಾರ್‌ನಲ್ಲಿ ನಡೆದಿದೆ. ಈ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಮೊದಲೇ ಇಮೇಲ್ ಮೂಲಕ ಮಾಹಿತಿ ನೀಡಲಾಗಿತ್ತು ಎಂದು ಆಯೋಗ ವಿವರಿಸಿದೆ. ಇದನ್ನೂ ಓದಿ: ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

SHOCKER. Inside Netaji Indoor stadium in Kolkata ATTEMPTS ARE BEING MADE TO OPEN BALLOT BOXES by @ECISVEEP and @BJP4India without the presence of party reps. @AITCofficial’s @DrShashiPanja & @KunalGhoshAgain are sitting on dharna outside. @MamataOfficial on her way to Netaji… pic.twitter.com/QCZANh8nvG

— Sagarika Ghose (@sagarikaghose) April 30, 2026

ಸ್ಟ್ರಾಂಗ್ ರೂಮ್‌ಗಳಿಗೆ ಎರಡು ಬೀಗಗಳ ಭದ್ರತೆ ಇದೆ. ಒಂದು ಕೀ ರಿಟರ್ನಿಂಗ್ ಆಫೀಸರ್ (RO) ಬಳಿ ಇದ್ದರೆ, ಮತ್ತೊಂದು ಅಸಿಸ್ಟೆಂಟ್ ರಿಟರ್ನಿಂಗ್ ಆಫೀಸರ್ (ARO) ಬಳಿ ಇರುತ್ತದೆ. ಅಭ್ಯರ್ಥಿಗಳ ಏಜೆಂಟರು ಕೂಡ ಅಲ್ಲಿ ಸೀಲ್ ಹಾಕಲು ಅವಕಾಶ ಇರುವುದರಿಂದ ಅಕ್ರಮಕ್ಕೆ ಅವಕಾಶವಿಲ್ಲ ಎಂದು ತಿಳಿಸಿದೆ.

ಯಾವುದೇ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಲಾಗಿಲ್ಲ ಮತ್ತು ಲೈವ್ ದೃಶ್ಯಾವಳಿಗಳನ್ನು ಎಲ್ಲಾ ರಾಜಕೀಯ ಪಕ್ಷಗಳ ವೀಕ್ಷಣೆಗೆ ಲಭ್ಯವಾಗುವಂತೆ ಮಾಡಲಾಗಿದೆ. ಚುನಾವಣಾ ಪ್ರಕ್ರಿಯೆಯು ಪಾರದರ್ಶಕವಾಗಿದ್ದು, ಮೇ 4 ರಂದು ನಡೆಯಲಿರುವ ಮತ ಎಣಿಕೆಗೆ ಎಲ್ಲಾ ಸಿದ್ಧತೆಗಳು ನಿಯಮದಂತೆಯೇ ನಡೆಯುತ್ತಿವೆ ಎಂದು ಆಯೋಗ ಹೇಳಿದೆ.

TAGGED:EVM TamperingMamata BanerjeeWest Bengalಇವಿಎಂ ಟ್ಯಾಪರಿಂಗ್‌ಕೋಲ್ಕತ್ತಾಪಶ್ಚಿಮ ಬಂಗಾಳಮಮತಾ ಬ್ಯಾನರ್ಜಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Love
Latest

ನಿನಗಾಗಿ ಕಾಯ್ದಿರಿಸಿದ ಹೃದಯವಿದು ಅಂತ ನೀನ್ಯಾಕೆ ಹೇಳ್ತಿಲ್ಲ?

Public TV
By Public TV
27 minutes ago
Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
41 minutes ago
TUMBAIL 00000 00000
Latest

ಇಂದಿನಿಂದ ದೇಶದಲ್ಲಿ ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ – ಏನಿದು ಹೊಸ ರೂಲ್ಸ್‌?

Public TV
By Public TV
49 minutes ago
RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
9 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
9 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?