ಚೆನ್ನೈ: ಫ್ಲೈಟ್‌ನಲ್ಲಿ 2 ಬಾರಿ ವಾಂತಿ ಮಾಡಿಕೊಂಡ ಪ್ರಯಾಣಿಕ, ಚೆನ್ನೈ ವಿಮಾನ ನಿಲ್ದಾಣದಲ್ಲಿ (Chennai Airport) ಚಲಿಸುತ್ತಿದ್ದ ವಿಮಾನದ ತುರ್ತು ನಿರ್ಗಮನ ದ್ವಾರದಿಂದ ಹಾರಿರುವ ಘಟನೆ ನಡೆದಿದೆ.
ಇಂದು ಮುಂಜಾನೆ ಶಾರ್ಜಾ-ಚೆನ್ನೈ ಏರ್ ಅರೇಬಿಯಾ ವಿಮಾನವು ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದು ಮುಂದೆ ಚಲಿಸುತ್ತಿದ್ದಾಗ, ಪುರುಷ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ಬಾಗಿಲು ತೆರೆದು ಹೊರಗೆ ಹಾರಿದ್ದಾನೆ. ಇದನ್ನು ಕಂಡು ಇತರೆ ಪ್ರಯಾಣಿಕರು ಆಘಾತಕ್ಕೊಳಗಾದರು. ಇದನ್ನೂ ಓದಿ: ಹಾರ್ಮುಜ್ ದಾಟಿದ 45,000 ಟನ್ ಎಲ್‌ಪಿಜಿ ಹೊತ್ತ ಭಾರತದ ‘ಸರ್ವಶಕ್ತಿ’ ಹಡಗು
ವಿಮಾನವು ಮುಖ್ಯ ರನ್‌ವೇಯಿಂದ ಹೊರಬಂದು ಟ್ಯಾಕ್ಸಿವೇಯಲ್ಲಿ ನಿಧಾನವಾಗಿ ಚಲಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ಘಟನೆ ಮುಖ್ಯ ರನ್‌ವೇಯಲ್ಲಿ ಸಂಭವಿಸಿಲ್ಲ ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಪೈಲಟ್ ತಕ್ಷಣವೇ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದರು. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿ ತಕ್ಷಣ ವ್ಯಕ್ತಿಯನ್ನು ವಶಕ್ಕೆ ಪಡೆದರು. ನಂತರ ಹೆಚ್ಚಿನ ತನಿಖೆಗಾಗಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಗಂಟೆಗಟ್ಟಲೇ ಸಿಸಿಟಿವಿ ಬಂದ್, ಬೂತ್‌ನಿಂದಲೇ ಪ್ರತಿಪಕ್ಷಗಳ ಏಜೆಂಟ್‌ಗಳು ಹೊರಕ್ಕೆ: ಬೆಚ್ಚಿ ಬೀಳಿಸುವಂತಿದೆ ಫಾಲ್ಟಾ ಅಕ್ರಮ
ಈ ಘಟನೆಯಿಂದಾಗಿ ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ಸ್ವಲ್ಪ ಸಮಯ ಅಡ್ಡಿಯಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಮುಖ್ಯ ರನ್‌ವೇಯನ್ನು ಮುಂಜಾನೆ 03:23 ರಿಂದ ಬೆಳಗ್ಗೆ 04:23 ರವರೆಗೆ ಮುಚ್ಚಲಾಯಿತು. ಆ ಅವಧಿಯಲ್ಲಿ ವಿಮಾನಗಳನ್ನು ದ್ವಿತೀಯ ರನ್‌ವೇಗೆ ತಿರುಗಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

