ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ (West Bengal) ಚುನಾವಣಾ ಫಲಿತಾಂಶ (Election Commission) ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ‍್ಯಾಲಿ (Victory Rallies) ನಡೆಸುವುದನ್ನು ಆಯೋಗ ನಿಷೇಧಿಸಿದೆ. ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ಅವರು ಈ ನಿರ್ಬಂಧವನ್ನು ದೃಢಪಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಎಲ್ಲಿಯೂ ಯಾವುದೇ ವಿಜಯೋತ್ಸವ ಆಚರಣೆಳಿಗೆ ಅವಕಾಶ ನೀಡಲಾಗುವುದಿಲ್ಲ. ಸೂಕ್ಷ್ಮ ಎಣಿಕೆ ಪ್ರಕ್ರಿಯೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates
ವಿವಿಧ ರಾಜಕೀಯ ಪಕ್ಷಗಳ ಮತಗಟ್ಟೆ ಏಜೆಂಟ್‌ಗಳು ಸಮಯಕ್ಕೆ ಸರಿಯಾಗಿ ಎಣಿಕೆ ಕೇಂದ್ರಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಬಂದಿವೆ. ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ಕೆಲವು ಸಿಸಿಟಿವಿ ಕ್ಯಾಮೆರಾಗಳು 5-10 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತಿರಲಿಲ್ಲ. ಈಗ ಸಮಸ್ಯೆ ಪರಿಹರಿಸಲಾಗಿದೆ ಎಂದು ಗುಪ್ತಾ ತಿಳಿಸಿದ್ದಾರೆ.
ಬೆಳಗ್ಗೆ 11:50ರ ವೇಳೆಗೆ ಬಿಜೆಪಿ 195 ಮತ್ತು ಟಿಎಂಸಿ 95, ಲೆಫ್ಟ್ 2 ಇತರೆ ಪಕ್ಷಗಳು 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಇನ್ನೂ ಚುನಾವಣಾ ಆಯೋಗದ ಅಧಿಕೃತ ಅಂಕಿಅಂಶಗಳಿಗಾಗಿ ಇನ್ನೂ ಕಾಯಲಾಗುತ್ತಿದೆ.
ಪಶ್ಚಿಮ ಬಂಗಾಳ
ರಾಜಕೀಯ ಕುತೂಹಲದ ಕೇಂದ್ರ ಪಶ್ಚಿಮ ಬಂಗಾಳದ 294 ವಿಧಾನಸಭೆಗಳಿಗೆ ಏ.23 ಮತ್ತು 29 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಿತು. ಒಟ್ಟು 2,926 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಮೊದಲ ಹಂತದ ಚುನಾವಣೆಗೆ 152 ಸ್ಥಾನಗಳಲ್ಲಿ 1,487 ಹಾಗೂ ಎರಡನೇ ಹಂತದ ಚುನಾವಣೆಗೆ 142 ಕ್ಷೇತ್ರಗಳಲ್ಲಿ ಒಟ್ಟು 1,448 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮೊದಲ ಹಂತದಲ್ಲಿ 93.19% ಹಾಗೂ ಎರಡನೇ ಹಂತದಲ್ಲಿ 92.47% ಮತದಾನ ನಡೆಯಿತು. ಈ ರಾಜ್ಯ ಎಸ್‌ಐಆರ್ ಬಳಿಕ ಚುನಾವಣೆ ಎದುರಿಸಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು 148 ಸೀಟ್‌ಗಳ ಬಹುಮತ ಬೇಕಿತ್ತು. ಈ ಬಾರಿ 385 ಮಹಿಳೆಯರು ಸ್ಪರ್ಧಿಸಿದ್ದರು.
ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ಬಿಜೆಪಿ ಮತ್ತು ಕಾಂಗ್ರೆಸ್ ಪ್ರಬಲ ಪೈಪೋಟಿ ಗೆಲುವಿಗಾಗಿ ಪ್ರಬಲ ಪೈಪೋಟಿ ನಡೆಸಿದ್ದವು. ರಾಜ್ಯದಲ್ಲಿ ಶಾಂತಿಯುತ ಮತದಾನಕ್ಕಾಗಿ ಕೇಂದ್ರ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಸಿಆರ್‌ಪಿಎಫ್ ನಿಯೋಜಿಸಿತ್ತು. ಹೀಗಿದ್ದು, ಅಲ್ಲಲ್ಲಿ ಒಂದಷ್ಟು ಗೊಂದಲಗಳಾಗಿವೆ. ಚುನಾವಣೆ ಬಳಿಕವೂ ಬಂಗಾಳದ ದಕ್ಷಿಣ 24 ಪರಗಣಗಳ 15 ಮತಗಟ್ಟೆಗಳಲ್ಲಿ ಮರು ಮತದಾನ ನಡೆಯಿತು. ಫಾಲ್ಟಾ ಕ್ಷೇತ್ರದ ಎಲ್ಲ 285 ಮತಗಟ್ಟೆಗಳಲ್ಲಿ ಮೇ 21ಕ್ಕೆ ಮರು ಮತದಾನ ನಡೆಯಲಿದೆ. ಕಳೆದ ಚುನಾವಣೆಯಲ್ಲಿ ಟಿಎಂಸಿ 213, ಬಿಜೆಪಿ 77 ಸ್ಥಾನಗಳನ್ನು ಗೆದ್ದಿದ್ದವು.
ಕಳೆದ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC): 215 ಸ್ಥಾನಗಳನ್ನು ಗೆದ್ದು ಪ್ರಚಂಡ ಬಹುಮತ ಸಾಧಿಸಿತ್ತು. ಭಾರತೀಯ ಜನತಾ ಪಕ್ಷ (BJP): 77 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಬಲ ವಿರೋಧ ಪಕ್ಷವಾಗಿ ಹೊರಹೊಮ್ಮಿತ್ತು. ಇತರರು: ರಾಷ್ಟ್ರೀಯ ಸೆಕ್ಯುಲರ್ ಮಜ್ಲಿಸ್ ಪಾರ್ಟಿ (RSMP) 1 ಸ್ಥಾನ ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನ ಗೆದ್ದಿದ್ದರು. ಕಾಂಗ್ರೆಸ್ ಮತ್ತು ಎಡರಂಗ: ಈ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಯಾವುದೇ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: ಮೊದಲು ಮತದಾನ, ಬಳಿಕ ಜಲಪಾನ – ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಮಾಸ್ಟರ್ ಪ್ಲಾನ್’ ವರ್ಕೌಟ್!

