ನವದೆಹಲಿ:ಇರಾನ್‌ನ ಪರಮೋಚ್ಚ ನಾಯಕ (Supreme Leader) ಆಯತೊಲ್ಲಾ ಸಯ್ಯದ್ ಅಲಿ ಖಮೇನಿ(Ayatollah Seyyed Ali Khamenei) ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ, ಭಾರತ ಸರ್ಕಾರ (Indian Government) ಮತ್ತು ಭಾರತದ ಜನತೆ ತೋರಿದ ಬೆಂಬಲ ಹಾಗೂ ಭಾಗಿಯಾಗಿದ್ದಕ್ಕೆ ಭಾರತದಲ್ಲಿರುವ ಇರಾನ್ ರಾಯಭಾರ (Iran Embassy) ಕಚೇರಿಯು ಧನ್ಯವಾದಗಳನ್ನು ಅರ್ಪಿಸಿದೆ.
ಭಾರತದ ರಾಜಕೀಯ ನಾಯಕರು, ಸಂಸದರು, ವಿದ್ವಾಂಸರು, ಬುದ್ಧಿಜೀವಿಗಳು ಮತ್ತು ವಿವಿಧ ಧರ್ಮಗಳ ಪ್ರತಿನಿಧಿಗಳು ಈ ಶೋಕಾಚರಣೆಯ ಅಂತ್ಯಕ್ರಿಯೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವುದು ಉಭಯ ದೇಶಗಳ ನಡುವಿನ ಆಳವಾದ ಐತಿಹಾಸಿಕ, ಸಾಂಸ್ಕೃತಿಕ ಮತ್ತು ಮಾನವೀಯ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ ಎಂದು ಇರಾನ್ ರಾಯಭಾರ ಕಚೇರಿಯು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.
The Embassy of the Islamic Republic of Iran in the Republic of India extends its heartfelt gratitude and sincere appreciation to the friendly Government and people of India, especially the official delegation that attended on behalf of the Government and people of India, for… pic.twitter.com/Xv01SK2fjz
— Iran in India (@Iran_in_India) July 5, 2026
ಭಾರತ ತೋರಿದ ಈ ಸ್ನೇಹ, ಸಹಾನುಭೂತಿ ಮತ್ತು ಹೃತ್ಪೂರ್ವಕ ಗೌರವದ ನಡೆಯನ್ನು ಇರಾನ್ ಜನತೆ ಎಂದಿಗೂ ಮರೆಯುವುದಿಲ್ಲ. ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಮತ್ತು ರಿಪಬ್ಲಿಕ್ ಆಫ್ ಇಂಡಿಯಾ ನಡುವಿನ ಶಾಶ್ವತ ಬಾಂಧವ್ಯಕ್ಕೆ ಇದು ಅಮೂಲ್ಯ ಸಾಕ್ಷಿಯಾಗಿದೆ ಎಂದು ಕೃತಜ್ಞತೆ ಸಲ್ಲಿಸಿದೆ. ಇದನ್ನೂ ಓದಿ: ಇಂದಿನಿಂದ 6 ದಿನ ಮೋದಿ ವಿದೇಶಿ ಪ್ರವಾಸ – ಇಂಡೋನೇಷ್ಯಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ಗೆ ಭೇಟಿ
ಇವರೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮತ್ತು ಜೆಕೆಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಕೂಡ ತೆಹ್ರಾನ್‌ಗೆ ಭೇಟಿ ನೀಡಿ ಇರಾನ್ ದೇಶಕ್ಕೆ ಸಾಂತ್ವನ ಹೇಳಿದ್ದರು.
