ಬೆಂಗಳೂರು: ದಕ್ಷಿಣ ಭಾರತದ ಹೆಮ್ಮೆಯ ಗಾನಕೋಗಿಲೆ, ಸ್ವರ ಸಾಮ್ರಾಜ್ಞಿ ಎಸ್. ಜಾನಕಿ (SJanaki) ಅವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯೆ ಹಾಗೂ ಹಿರಿಯ ನಟಿ ಡಾ. ಉಮಾಶ್ರೀ (Umashree) ಅವರು ಕಂಬನಿ ಮಿಡಿದಿದ್ದಾರೆ.
ಜಾನಕಮ್ಮನವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ತಮ್ಮ ಕಂಠಸಿರಿಯ ಮೂಲಕ ಅಸಂಖ್ಯಾತ ಜನರ ಮನೆಮನಗಳಲ್ಲಿ ನೆಲೆಸಿದ್ದ ಅವರು ಸ್ವರ ಸಾಮ್ರಾಜ್ಞಿ ಎನಿಸಿಕೊಂಡಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಳಿ ಸೀರೆಗೆ ಗುಲಾಬಿ ಮುಡಿಸುತ್ತಿದ್ದ ಜಾನಕಿ!
ಕನ್ನಡ ಸೇರಿದಂತೆ ಸಾವಿರಾರು ಸುಮಧುರ ಗೀತೆಗಳ ಮೂಲಕ ಭಾರತೀಯರ ನೆಚ್ಚಿನ ಗಾಯಕಿಯಾಗಿದ್ದ ಜಾನಕಮ್ಮ ಅವರ ಅಗಲಿಕೆ ಇಡೀ ಕಲಾ ಲೋಕಕ್ಕೆ ತುಂಬಲಾರದ ನಷ್ಟ ತಂದಿದೆ ಎಂದು ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಅರಮನೆಯಂತ ಮನೆ ಇದ್ರೂ ಮೈಸೂರಲ್ಲೇ ಪ್ರಾಣ ಬಿಡ್ತೀನಿ ಎಂದಿದ್ರು
ಸ್ವರ ಸಾಮ್ರಾಜ್ಞಿ ಎಸ್. ಜಾನಕಿ ನಿಧನಕ್ಕೆ ಹಿರಿಯ ನಟಿ ಉಮಾಶ್ರೀ ಕಂಬನಿ
