ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ(Monsoon Session) ಮೊದಲ ದಿನವೇ ನೀಟ್ (NEET) ಪರೀಕ್ಷೆ ಅಕ್ರಮ ಹಾಗೂ ಜಂತರ್ ಮಂತರ್‌ನಲ್ಲಿ(Jantar Mantar) ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ಬಲಪ್ರಯೋಗದ ವಿಷಯ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರು ಈ ವಿಷಯವನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ಸದನದ ಕಲಾಪವನ್ನು ಮಧ್ಯಾಹ್ನ 12:30ಕ್ಕೆ ಮುಂದೂಡಲಾಯಿತು.
ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ‘ಚಲೋ ಸಂಸತ್’ ಮೆರವಣಿಗೆಗೆ ಯತ್ನಿಸುತ್ತಿದ್ದ ನೀಟ್ ಅಭ್ಯರ್ಥಿಗಳು, ವಿದ್ಯಾರ್ಥಿಗಳು ಮತ್ತು ಯುವಜನರ ಮೇಲೆ ದೆಹಲಿ ಪೊಲೀಸರು ಬಲಪ್ರಯೋಗ ಹಾಗೂ ಲಾಠಿಚಾರ್ಜ್ ನಡೆಸಿರುವುದನ್ನು ಖರ್ಗೆ ಕಠಿಣವಾಗಿ ಖಂಡಿಸಿದರು. ಇದನ್ನೂ ಓದಿ: ಯುವಕರು ದೇಶಕ್ಕೆ ಹೊಸ ದಿಕ್ಕು ತೋರಿಸುತ್ತಿದ್ದಾರೆ – 56 ವರ್ಷದ ಯುವಕರ ಬಗ್ಗೆ ಹೇಳಿದ್ದಲ್ಲ: ಮೋದಿ

ಖರ್ಗೆ ಅವರ ಹೇಳಿಕೆಗೆ ಆಡಳಿತ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಅದೇ ವೇಳೆ, ನೀಟ್ ಪರೀಕ್ಷಾ ಸುಧಾರಣೆ ಹಾಗೂ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿಯ ಕುರಿತು ತಕ್ಷಣವೇ ಚರ್ಚೆಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಪಟ್ಟು ಹಿಡಿದು ಸಭಾಪತಿಯವರ ಪೀಠದ ಮುಂಭಾಗಕ್ಕೆ ಧಾವಿಸಿದರು. ಇದನ್ನೂ ಓದಿ: ಕಾಕ್ರೋಚ್‌ಗಳ ಮೇಲೆ ಪೊಲೀಸರ ಲಾಠಿಚಾರ್ಜ್ – ದೆಹಲಿಯ ಕೆಲ ಭಾಗಗಳಲ್ಲಿ ಇಂಟರ್‌ನೆಟ್ ಸ್ಥಗಿತ
