ಬೆಂಗಳೂರು: ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ. ಹೀಗಾಗಿ ಅವರು ಯೋಜನೆ ವಿರೋಧ ಮಾಡಬಾರದು ಅಂತ ಸಚಿವ ಈಶ್ವರ್ ಖಂಡ್ರೆ (Eshwar Khandre) ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಮಾತನಾಡಿದ ಅವರು, ಮೇಕೆದಾಟು (Mekedatu) ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆಯ ಯೋಜನೆಯಾಗಿದ್ದು, ಇದಕ್ಕೆ ತಮಿಳುನಾಡು ಆಕ್ಷೇಪ, ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಕುಡಿಯುವ ನೀರು ಪ್ರತಿಯೊಬ್ಬರ ಮೂಲಭೂತ ಹಕ್ಕು, ರಾಜಕೀಯ ಕಾರಣಕ್ಕಾಗಿ ವಿರೋಧ ಮಾಡುವುದು ಸರ್ವಥಾ ಸಮರ್ಥನೀಯವಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಂಸದ-ಶಾಸಕರ ತವರೂರಲ್ಲೇ ವೈದ್ಯರಿಲ್ಲ – ಸಕಾಲಕ್ಕೆ ಚಿಕಿತ್ಸೆ ಸಿಗದೇ ಬಾಲಕಿ ಸಾವು ಆರೋಪ
ಬೆಂಗಳೂರಿನಲ್ಲಿ 1 ಕೋಟಿಗೂ ಹೆಚ್ಚು ಜನರಿದ್ದು, ಕುಡಿಯುವ ನೀರು ಪೂರೈಸಲು ಮತ್ತು ಜಲ ವಿದ್ಯುತ್ ಉತ್ಪಾದಿಸಲು ರಾಜ್ಯ ಸರ್ಕಾರ ಈ ಯೋಜನೆ ರೂಪಿಸಿದೆ. ಈ ಯೋಜನೆಯಿಂದ ತಮಿಳುನಾಡಿಗೂ ಲಾಭವಾಗುತ್ತದೆ. ಹೀಗಾಗಿ ನೆರೆ ರಾಜ್ಯ ಬೆಂಬಲ ನೀಡಬೇಕೇ ಹೊರತು ವಿರೋಧ ಮಾಡಬಾರದು ಎಂದು ಹೇಳಿದ್ದಾರೆ.
