ಹುಬ್ಬಳ್ಳಿ: ಕಲಬುರಗಿಯಿಂದ ಧಾರವಾಡಕ್ಕೆ ಬರುತ್ತಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲೇ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ.
ಧಾರವಾಡದ ನಿವಾಸಿಯಾದ ಶಿಕ್ಷಕ ಸತೀಶ್ ಮರಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಕಲಬುರಗಿಯಿಂದ ಹುಬ್ಬಳ್ಳಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಬಸ್‌ನಲ್ಲೇ ಸತೀಶ್ ಅವರಿಗೆ ಏಕಾಏಕಿ ಹೃದಯಾಘಾತವಾಗಿದೆ. ಇದನ್ನೂ ಓದಿ: ಭಾರತಕ್ಕೆ ಮೊದಲ ಡೆಂಗ್ಯೂ ಲಸಿಕೆ ‘QDENGA’ಗೆ ಅನುಮೋದನೆ
ಪ್ರಯಾಣಿಕನ ಸ್ಥಿತಿ ಗಂಭೀರವಾಗುತ್ತಿದ್ದಂತೆ ಚಾಲಕ ಬಸ್‌ನ್ನು ನೇರವಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸತೀಶ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಹೃದಯಾಘಾತದಿಂದ ಸಾವಾಗಿರುವ ಬಗ್ಗೆ ವೈದ್ಯರು ಹಾಗೂ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇದನ್ನೂ ಓದಿ: ಜಮಖಂಡಿಯಲ್ಲಿ ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ
