ನವದೆಹಲಿ: ಅಯೋಧ್ಯೆಯ ರಾಮ ಮಂದಿರದ (Ram Temple) ದೇಣಿಗೆ ಕಳ್ಳತನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳು (CJI) ಎಚ್ಚರಿಕೆ ನೀಡಿದ್ದಾರೆ.
ದೇಣಿಗೆ ಕಳ್ಳತನ ಆರೋಪದ ತನಿಖೆಯನ್ನು ನ್ಯಾಯಾಲಯದ (Court) ಮೇಲ್ವಿಚಾರಣೆಯಲ್ಲಿ ಸಿಬಿಐ (CBI) ತನಿಖೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾ. ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ್ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರು ಈ ವಿಷಯವನ್ನು ರಾಜಕೀಯಗೊಳಿಸದಂತೆ ಪೀಠ ಎಚ್ಚರಿಕೆ ನೀಡಿತು. ಇದನ್ನೂ ಓದಿ: ಮೋದಿ ಮೌನ ಅಕ್ಷಮ್ಯ – ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣದ ಸ್ವತಂತ್ರ ತನಿಖೆಗೆ ರಾಹುಲ್, ಖರ್ಗೆ ಆಗ್ರಹ
ವಿಚಾರಣೆಯ ಸಂದರ್ಭದಲ್ಲಿ, ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪೀಠಕ್ಕೆ ಸ್ಥಿತಿಗತಿ ವರದಿಯನ್ನು ಸಲ್ಲಿಸಲಾಗಿದೆ ಮತ್ತು ಎಂಟು ಜನರನ್ನು ಬಂಧಿಸಲಾಗಿದೆ ತಿಳಿಸಿದರು. ಅಲ್ಲದೇ ನಾನು ಹೆಚ್ಚಿನದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಸ್ಥಿತಿಗತಿ ವರದಿಯನ್ನು ಪರಿಶೀಲಿಸಿದ ಪೀಠವು, ಎಸ್‌ಐಟಿ ತನಿಖೆ ನಡೆಸುತ್ತಿದೆಯೇ ಎಂದು ಪ್ರಶ್ನಿಸಿತು. ಇದಕ್ಕೆ ಮೆಹ್ತಾ ಅವರು, ಆರೋಪದ ಸತ್ಯಾಸತ್ಯತೆಯನ್ನು ಮೊದಲು ಎಸ್‌ಐಟಿ ತನಿಖೆ ನಡೆಸಿ ಪತ್ತೆಹಚ್ಚಿದೆ. ಈಗ ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದರು.
ಪೀಠವು ಎಸ್‌ಐಟಿ ತನಿಖೆಯನ್ನು ನಡೆಸಬಹುದು. ಅಲ್ಲದೇ ಅದನ್ನು ಹಿರಿಯ ಅಧಿಕಾರಿಗಳೊಂದಿಗೆ ಪುನರ್ ರಚಿಸುವಂತೆ ಉತ್ತರ ಪ್ರದೇಶದ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸ್ಥಿತಿಗತಿ ವರದಿಯನ್ನು ಪೂರ್ತಿ ಪರಿಶೀಲಿಸಲು ಮೂರರಿಂದ ನಾಲ್ಕು ದಿನಗಳು ಬೇಕಾಗುತ್ತದೆ. ಮುಂದಿನ ವಿಚಾರಣೆಯನ್ನು ಜುಲೈ 27 ಕ್ಕೆ ನಡೆಸಲಾಗುತ್ತದೆ. ಅದರ ನಂತರ ಕೆಲವು ನಿರ್ದೇಶನಗಳನ್ನು ನೀಡಲಾಗುತ್ತದೆ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆದ್ರೆ ಸರ್ಕಾರಿ ಯೋಜನೆಗಳ ಸೌಲಭ್ಯ ಸಿಗಲ್ವಾ? – ಸುಪ್ರೀಂ ಹೇಳಿದ್ದೇನು?
