– ಪ್ರಧಾನ್ ರಾಜೀನಾಮೆ ಕೇಳೋದಕ್ಕೂ ಪ್ರಧಾನಿಗೆ ಧೈರ್ಯವಿಲ್ಲ ಎಂದು ಲೇವಡಿ
ನವದೆಹಲಿ: ಯುವಜನರ ಬಗ್ಗೆ ಇಷ್ಟೊಂದು ವೈರಾಗ್ಯ ಹೊಂದಿದ ಪ್ರಧಾನಿ ಮತ್ತೊಬ್ಬರಿಲ್ಲ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ನರೇಂದ್ರ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ.
प्रधानमंत्री मोदी भारत के इतिहास के सबसे युवा-विरोधी प्रधानमंत्री हैं – इतने युवा विरोधी कि एक नाकाम शिक्षा मंत्री धर्मेंद्र प्रधान का इस्तीफा भी नहीं ले सकते।
152 पेपर लीक। 7.5 करोड़ छात्र पीड़ित। और सज़ा एक दोषी को भी नहीं। सजा किसे मिली? मेहनती युवाओं को।
और जब इन बच्चों ने… pic.twitter.com/DbX5L4Iq5C
— Rahul Gandhi (@RahulGandhi) July 20, 2026
ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ‘ಕಾಕ್ರೋಚ್ʼ ಪ್ರತಿಭಟನೆ ಮುಗಿಸಲು ಮನವಿ ಮಾಡಿದ್ದೇನೆ – ಜೆಪಿ ನಡ್ಡಾರಿಂದ ಮಾತುಕತೆ ಬಗ್ಗೆ ಅಧಿಕೃತ ಮಾಹಿತಿ
ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಇತಿಹಾಸದಲ್ಲೇ ಯುವಜನರ ವಿರುದ್ಧದ ಅತ್ಯಂತ ವೈರಾಗ್ಯ ಹೊಂದಿರುವ ಪ್ರಧಾನಮಂತ್ರಿ ಎಂದು ಕಿಡಿ ಕಾರಿದ್ದಾರೆ. ಅಲ್ಲದೇ ʻಯುವಜನರ ವಿರುದ್ಧ ಇಷ್ಟೊಂದು ವೈರಾಗ್ಯ ಹೊಂದಿರುವ ಪ್ರಧಾನಿ ಮತ್ತೊಬ್ಬರಿಲ್ಲ. ವಿಫಲರಾದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕೇಳಲೂ ಅವರಿಗೆ ಧೈರ್ಯವಿಲ್ಲʼ ಎಂದು ಬರೆದುಕೊಂಡಿದ್ದಾರೆ.

ಇತ್ತೀಚಿನ NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಂಸತ್ ಭವನದತ್ತ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ CJP ಕಾರ್ಯಕರ್ತರ ವಿರುದ್ಧ ದೆಹಲಿ ಪೊಲೀಸರು ಕೈಗೊಂಡ ಕ್ರಮವನ್ನು ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. ಇದನ್ನೂ ಓದಿ: ರಾಮ ಮಂದಿರ ದೇಣಿಗೆ ಕಳ್ಳತನ ರಾಜಕೀಯಗೊಳಿಸಬೇಡಿ: ಸುಪ್ರೀಂ ಕೋರ್ಟ್
ಮುಂದುವರಿದು… 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಇದಕ್ಕೆ ಬಲಿಯಾಗಿದ್ದಾರೆ. ಆದರೆ ಒಬ್ಬ ತಪ್ಪಿತಸ್ಥನಿಗೂ ಶಿಕ್ಷೆಯಾಗಿಲ್ಲ. ಶಿಕ್ಷೆ ಅನುಭವಿಸಿದ್ದು ಮಾತ್ರ ಪರಿಶ್ರಮದಿಂದ ಓದುತ್ತಿರುವ ವಿದ್ಯಾರ್ಥಿಗಳು. ಶಿಕ್ಷಣದ ಬಗ್ಗೆ ನ್ಯಾಯಸಮ್ಮತ ಪ್ರಶ್ನೆಗಳನ್ನ ಕೇಳಿದ ವಿದ್ಯಾರ್ಥಿಗಳಿಗೆ ಉತ್ತರವಾಗಿ ಲಾಠಿ ಪ್ರಹಾರ, ಬಂಧನ ಮತ್ತು ದಮನವೇ ಸಿಕ್ಕಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರು ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ. ಆದ್ರೆ ನ್ಯಾಯ ಕೇಳಿದ ವಿದ್ಯಾರ್ಥಿಗಳನ್ನ ಎಳೆದೊಯ್ದು ಜೈಲಿಗಟ್ಟುದ್ದಾರೆ. ಈ ಸರ್ಕಾರ ಯುವಜನರನ್ನ ಕೇವಲ ನಿರ್ಲಕ್ಷಿಸುತ್ತಿಲ್ಲ, ಅವರ ಮೇಲೆಯೇ ದಾಳಿ ಮಾಡುತ್ತಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಪ್ರಿಯಾಂಕಾ ಗಾಂಧಿಯಿಂದಲೂ ಖಂಡನೆ
ಇದಕ್ಕೂ ಮುನ್ನ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನ ತೀವ್ರವಾಗಿ ಖಂಡಿಸಿದ್ದಾರೆ. ಇದನ್ನೂ ಓದಿ: ವೈದ್ಯಕೀಯ ಸೀಟು ಕೊಡಿಸುತ್ತೇವೆ ಎನ್ನುವ ವಂಚಕರ ಬಗ್ಗೆ ಇರಲಿ ಎಚ್ಚರ: ಕೆಇಎ
ಪ್ರತಿಭಟನಾಕಾರರನ್ನ ಚದುರಿಸಲು ಪೊಲೀಸರು ಬಲಪ್ರಯೋಗ ನಡೆಸಿರುವುದನ್ನ ಉಲ್ಲೇಖಿಸಿದ ಅವರು, ನಾವೆಲ್ಲರೂ ಶಿಕ್ಷಣ ನೀತಿಯ ಕುರಿತ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ಕೇಳುತ್ತಿದ್ದೇವೆ. ಆದರೆ ಸರ್ಕಾರ ಚರ್ಚೆಗೆ ಸಿದ್ಧವಾಗದೇ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ, ಲಾಠಿ ಪ್ರಹಾರ ನಡೆಸುತ್ತಿದೆ. ಏಕೆ? ಅವರು ನಮ್ಮ ಮಕ್ಕಳಲ್ಲವೇ? ಎಂದು ಮಾಧ್ಯಮಗಳ ಮುಂದೆ ಪ್ರಶ್ನಿಸಿದ್ದಾರೆ.
