– ಇಬ್ಬರಿಗೆ ಸಣ್ಣಪುಟ್ಟ ಗಾಯ
ವಿಜಯಪುರ: ಟ್ರ್ಯಾಕ್ಟರ್‌ಗೆ (Tractor) ಹಿಂಬದಿಯಿಂದ ಲಾರಿ (Lorry) ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಿಡಗುಂದಿ (Nidagundi) ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ (Muddebihal) ಕ್ರಾಸ್ ಬಳಿ ನಡೆದಿದೆ.
ಟ್ರ್ಯಾಕ್ಟರ್‌ನಲ್ಲಿ ಕಾರ್ಮಿಕರು ಕಬ್ಬು ಕಟಾವಿಗೆಂದು ಇಂಡಿಯಿಂದ ಮಂಡ್ಯಕ್ಕೆ ತೆರಳುತ್ತಿದ್ದರು. ಸ್ಪೀಡ್ ಬ್ರೇಕರ್ ಇದ್ದ ಹಿನ್ನೆಲೆ ಚಾಲಕ ಟ್ರ್ಯಾಕ್ಟರ್ ನಿಧಾನವಾಗಿ ಚಲಾಯಿಸಿದ್ದಾನೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಟ್ರ‍್ಯಾಕ್ಟರ್‌ಗೆ ಗುದ್ದಿದೆ. ಲಾರಿ ಗುದ್ದಿದ ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ‘ಸಾವಿನ ಕಂಟಕ’ ಎಂದು ಹೆದರಿಸಿ ಚಿನ್ನಾಭರಣ ದೋಚಿದ ಖದೀಮ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಹಾಗೂ ಮೃತರ ದೇಹ ನಿಡಗುಂದಿ ಆಸ್ಪತ್ರೆಗೆ ರವಾನಿಸಲಾಗಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ನೀವು ಟ್ರೆಕ್ಕಿಂಗ್ ಹೋಗ್ತೀರಾ? – ಈಗ 30 ದಿನ ಮೊದಲೇ ಬುಕ್ ಮಾಡಿ, ಫುಲ್ ರೀಫಂಡ್ ಕಟ್!
