ಚಿತ್ರದುರ್ಗ: ಫುಟ್‌ಪಾತ್‌ನಲ್ಲಿ (Footpath) ನಿಂತಿದ್ದವರ ಮೇಲೆ ಕಾರು (Car) ಹರಿದ ಪರಿಣಾಮ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿದ್ದು, ಮಹಿಳೆಯ ಕಾಲು ಮುರಿತಗೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಳಲ್ಕೆರೆ (Holalkere) ತಾಲೂಕಿನ ಟಿ.ನುಲೇನೂರು (T. Nulenur) ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಪುಟ್‌ಪಾತ್‌ಗೆ ನುಗ್ಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹೊಳಲ್ಕೆರೆ ತಾಲೂಕಿನ ದಗ್ಗೆ ಗ್ರಾಮದ ಪ್ರದೀಪ್ (30) ಸಾವನ್ನಪ್ಪಿದ್ದಾರೆ. ಮತ್ತೋರ್ವ ಮಹಿಳೆಗೆ ಕಾಲು ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ವಿದ್ಯಾರ್ಥಿಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳಬೇಡಿ: ರಾಹುಲ್ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ
ಕಾರು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ವೇಳೆ ಗಲಾಟೆ ಕೇಸ್ – ಪ್ರಮುಖ ಆರೋಪಿ ಬಂಧನ
