ನವದೆಹಲಿ: ಮಂಡ್ಯದಲ್ಲಿ(Mandya) ಆಧಾರ್ ಸೇವಾ ಕೇಂದ್ರ'(4 ಇಸಿಎಂಪಿ ಕಿಟ್ಸ್ ಒಳಗೊಂಡ) ಸ್ಥಾಪಿಸಲು ಭಾರತ ಸರಕಾರವು(India Government) ಅನುಮೋದನೆ ನೀಡಿದೆ ಎಂದು ಮಂಡ್ಯ ಸಂಸದ, ಕೇಂದ್ರ ಬೃಹತ್ ಕೈಗಾರಿಕ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರವ ಅವರು ಅನುಮೋದನೆ ನೀಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಪೋಸ್ಟ್‌ನಲ್ಲಿ ಏನಿದೆ?
ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಡ್ಯದಲ್ಲಿ ಆಧಾರ್ ಸೇವಾ ಕೇಂದ್ರ’ (4 ಇಸಿಎಂಪಿ ಕಿಟ್ಸ್ ಒಳಗೊಂಡ) ಸ್ಥಾಪಿಸಲು ಭಾರತ ಸರಕಾರವು ಅನುಮೋದನೆ ನೀಡಿದೆ ಎಂಬ ವಿಷಯವನ್ನು ಹಂಚಿಕೊಳ್ಳಲು ನನಗೆ ಬಹಳ ಸಂತೋಷವಾಗುತ್ತಿದೆ.
ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಡ್ಯದಲ್ಲಿ ‘ಆಧಾರ್ ಸೇವಾ ಕೇಂದ್ರ’ (4 ಇಸಿಎಂಪಿ ಕಿಟ್ಸ್ ಒಳಗೊಂಡ) ಸ್ಥಾಪಿಸಲು ಭಾರತ ಸರಕಾರವು ಅನುಮೋದನೆ ನೀಡಿದೆ ಎಂಬ ವಿಷಯವನ್ನು ಹಂಚಿಕೊಳ್ಳಲು ನನಗೆ ಬಹಳ ಸಂತೋಷವಾಗುತ್ತಿದೆ.
ನನ್ನ ಮನವಿಗೆ ಸ್ಪಂದಿಸಿದ ಕೇಂದ್ರದ ಸಚಿವರಾದ ಶ್ರೀ @AshwiniVaishnaw ಅವರು;… pic.twitter.com/Ujs1S7x5wD
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 27, 2026
ನನ್ನ ಮನವಿಗೆ ಸ್ಪಂದಿಸಿದ ಕೇಂದ್ರದ ಸಚಿವರಾದ ಅಶ್ವಿನಿ ವೈಷ್ಣವ್ ಮಂಡ್ಯದಲ್ಲಿ ಆಧಾರ್ ಸೇವಾ ಕೇಂದ್ರ ಸ್ಥಾಪಿಸುವ ಬಗ್ಗೆ ನನಗೆ ಪತ್ರ ಮುಖೇನ ತಿಳಿಸಿದ್ದಾರೆ. ಈ ಕೇಂದ್ರದ ಸ್ಥಾಪನೆಯಿಂದ ಮಂಡ್ಯ ಮತ್ತು ಸುತ್ತಮುತ್ತಲ ಪ್ರದೇಶದ ಜನರಿಗೆ ಆಧಾರ್ ನೋಂದಣಿ ಹಾಗೂ ಮಾಹಿತಿ ನವೀಕರಣ ಸೇವೆ ಪಡೆಯುವುದು ಅತ್ಯಂತ ಸುಲಭವಾಗಲಿದೆ.
ರಾಷ್ಟ್ರದ ಜನತೆಗೆ ನಾಗರೀಕ ಸೇವೆಗಳನ್ನು ಸುಲಭ ಮತ್ತು ಸರಳವಾಗಿ ಒದಗಿಸುವ ನಿಟ್ಟಿನಲ್ಲಿ ದೃಢ ಸಂಕಲ್ಪ, ಸ್ಪಷ್ಟ ದೂರದೃಷ್ಟಿ ಹೊಂದಿರುವ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ. ಹಾಗೆಯೇ, ಈ ಪ್ರಮುಖ ಉಪಕ್ರಮವನ್ನು ಸಾಕಾರಗೊಳಿಸುವಲ್ಲಿ ತ್ವರಿತ ಬೆಂಬಲ ಮತ್ತು ಸಕಾರಾತ್ಮಕ ಸ್ಪಂದನೆ ನೀಡಿದ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ನಾನು ಮನಃಪೂರ್ವಕವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
‘ಡಿಜಿಟಲ್ ಇಂಡಿಯಾ’ವನ್ನು ಬಲಪಡಿಸುವ ಹಾಗೂ ತಳಮಟ್ಟದಲ್ಲಿ ಸಮರ್ಥ, ಸುಲಭವಾಗಿ ಲಭ್ಯವಿರುವ ಮತ್ತು ತಂತ್ರಜ್ಞಾನ ಆಧರಿತ ಸಾರ್ವಜನಿಕ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಇದು ಮತ್ತೊಂದು ಮಹತ್ವದ ಹೆಜ್ಜೆ. ಮಂಡ್ಯ ಜಿಲ್ಲೆಗೆ ಆಧಾರ್ ಸೇವಾ ಕೇಂದ್ರ ವರದಾನವಾಗಲಿದೆ.
