ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ವಲಸೆ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಇಂದು ಸಂಜೆ ಕುಲ್ಗಮ್ ಜಿಲ್ಲೆಯ ಕೆಲ್ಲಾಮ್ ಗ್ರಾಮದಲ್ಲಿ ಇಬ್ಬರು ಸ್ಥಳೀಯರಲ್ಲದ ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಛತ್ತೀಸ್‌ಗಢ ನಿವಾಸಿ ದೀಪಕ್ ಸ್ಥಳದಲ್ಲೇ ಮೃತಪಟ್ಟ ದುರ್ದೈವಿ. ಭೂಪೇಂದ್ರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಪ್ರಮುಖ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.
ಕಳೆದ 10 ದಿನಗಳಲ್ಲಿ ಭಯೋತ್ಪಾದಕರು ನಡೆಸಿದ ಎರಡನೇ ದಾಳಿ ಇದಾಗಿದೆ. ಕಳೆದ ವಾರ ಅನಂತ್‌ನಾಗ್‌ನಲ್ಲಿ ನಡೆದ ದಾಳಿಯಲ್ಲಿ ಓರ್ವ ಪೊಲೀಸ್ ಹುತಾತ್ಮರಾಗಿದ್ದರು.
