ಮಂಡ್ಯ: ತಮಿಳುನಾಡಿಗೆ (Tamil Nadu) ಕಾವೇರಿ ನೀರು ಬಿಡುವ ವಿಚಾರವಾಗಿ (Cauvery Water Disputes,) ಜನರ ಪ್ರತಿಭಟನೆ ಭುಗಿಲೆದ್ದಿದೆ. ಮಂಡ್ಯದಲ್ಲಿ ಪ್ರತಿಭಟನಾಕಾರರು ತಮಿಳುನಾಡು ಸಿಎಂ ವಿಜಯ್ (CM Vijay) ವಿರುದ್ಧ ಗೋ ಬ್ಯಾಕ್ ಪೋಸ್ಟರ್ ಹಿಡಿದು ಆಕ್ರೋಶ ಹೊರಹಾಕಿದ್ದಾರೆ.
ಆಗಸ್ಟ್ 3 ರಂದು ರಾಜ್ಯಕ್ಕೆ ವಿಜಯ್ ಆಗಮನಕ್ಕೆ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಂಜಯ್ ವೃತ್ತದಲ್ಲಿ ಟೀ ಕಾಯಿಸಿ, ವಿಜಯ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಕಾವೇರಿ ವಿಚಾರದಲ್ಲಿ ಕ್ಯಾತೆ ತೆಗೆದು ಇದೀಗ ಮಾತುಕತೆಗೆ ಬರುತ್ತಿದ್ದಾರೆ. ಮೇಕೆದಾಟು ಡ್ಯಾಮ್ ನಿರ್ಮಾಣಕ್ಕೂ ತಮಿಳುನಾಡು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಬಿಡದಿ ಟೌನ್‌ಶಿಪ್ ವಿರೋಧಿಸಿ ಆ.9 ರಿಂದ ಜೆಡಿಎಸ್ ಬೃಹತ್ ಪಾದಯಾತ್ರೆ – ಕೇಂದ್ರ ಸಚಿವ ಹೆಚ್‌ಡಿಕೆ ಚಾಲನೆ
ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂಬುದು ಕಾವೇರಿ ಕೊಳ್ಳದ ಜನರ ಒತ್ತಾಯವಾಗಿದೆ. ಸಿಡಬ್ಲ್ಯೂಎಂಎ ಆದೇಶ ಹಾಗೂ ಸಿಎಂ ವಿಜಯ್ ಭೇಟಿಯ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನೆ ಮತ್ತಷ್ಟು ಕಾವು ಪಡೆದುಕೊಳ್ಳುವ ಮುನ್ಸೂಚನೆ ಸಿಕ್ಕಿದೆ.

ಹೇಮಾವತಿ ಡ್ಯಾಮ್ ಮುತ್ತಿಗೆಗೆ ಮುಂದಾದ ಕನ್ನಡಪರ ಸಂಘಟನೆಗಳು
ಹಾಸನದಲ್ಲೂ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಹಾಸನ ನಗರದಲ್ಲಿ ಕರವೇ ನಾರಯಣಗೌಡ ಬಣದಿಂದ ಪ್ರತಿಭಟನೆಗೆ ಮುಂದಾಗಿದ್ದಾರೆ. ಮತ್ತೂಂದೆಡೆ ಕಾಲುವೆಗಳಿಗೆ ನೀರು ಹರಿಸಲು ಒತ್ತಾಯಿಸಿ ಹೇಮಾವತಿ ಜಲಾಶಯಕ್ಕೆ ಮುತ್ತಿಗೆ ಹಾಕಲು ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಗಳು ಮುಂದಾಗಿವೆ.
ರೈತರ ಆಕ್ರೋಶದ ನಡುವೆ ರಾಜ್ಯ ಸರ್ಕಾರ ಕೆಆರ್‌ಎಸ್‌ನಿಂದ ನೀರು ಹರಿಸದಿರಲು ದೃಢ ನಿರ್ಧಾರ ತಳೆಯುತ್ತಾ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಕಾವೇರಿ ವಿವಾದ: ಈ ಸರ್ಕಾರಕ್ಕೆ ರೈತರ ಮೇಲೆ ಕಿಂಚಿತ್ತಾದರೂ ಕಾಳಜಿ ಇದೆಯೇ? – ಸುಮಲತಾ ಅಂಬರೀಷ್ ವಾಗ್ದಾಳಿ
