ರಾಯಚೂರು: ನಾರಾಯಣಪುರ ಜಲಾಶಯದಿಂದ (Narayanapura Dam) 1.40 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕೃಷ್ಣಾ ನದಿ (Krishna River) ಮೈದುಂಬಿ ಹರಿಯುತ್ತಿದ್ದು, ದೇವದುರ್ಗದ ಹೂವಿನಹಡಗಲಿ ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆಯಾಗಿದೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆಯ (Rain) ಪರಿಣಾಮ ಕೊಯ್ನಾ ಜಲಾಶಯಕ್ಕೆ ಅಪಾರ ಪ್ರಮಾಣದ ಒಳಹರಿವು ಬರುತ್ತಿದೆ. ಇದರಿಂದಾಗಿ ಭಾರೀ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದ್ದು, ನಾರಾಯಣಪುರ ಜಲಾಶಯದ ಒಳಹರಿವು ಹೆಚ್ಚಳವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದಿಂದ 1.40 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಹಳಿ ಮೇಲಿನ ಮಣ್ಣು ತೆರವು ಪೂರ್ಣ – ಸಕಲೇಶಪುರ ಮಾರ್ಗದಲ್ಲಿ ರೈಲು ಸಂಚಾರ ಆರಂಭ
ಡ್ಯಾಮ್‌ನಿಂದ ನೀರು ಬಿಡುಗಡೆ ಮಾಡಿ ಲಿಂಗಸುಗೂರಿನ ಶೀಲಹಳ್ಳಿ ಸೇತುವೆ, ದೇವದುರ್ಗದ ಹೂವಿನಹಡಗಲಿ ಸೇತುವೆಗಳು ಮುಳುಗಡೆ ಹಂತದಲ್ಲಿವೆ. ಈಗಾಗಲೇ ಕಾಡ್ಲೂರಿನ ಉಪೇಂದ್ರ ಕರಾರ್ಚಿತ ಪ್ರಾಣದೇವರ ದೇವಾಲಯ ಸಂಪೂರ್ಣ ಜಲಾವೃತವಾಗಿದೆ. ಇದನ್ನೂ ಓದಿ: ರಾಜ್ಯದ ಹಲವೆಡೆ ಅಬ್ಬರದ ಮಳೆ – ಭರ್ತಿ ಹಂತದಲ್ಲಿ ಜಲಾಶಯಗಳು, ಹಲವು ಸೇತುವೆಗಳು ಮುಳುಗಡೆ
