ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-22
ಮಂಗಳೂರು: 28-25
ಶಿವಮೊಗ್ಗ: 26-22
ಬೆಳಗಾವಿ: 24-22
ಮೈಸೂರು: 28-22

ಮಂಡ್ಯ: 28-22
ಮಡಿಕೇರಿ: 23-20
ರಾಮನಗರ: 28-22
ಹಾಸನ: 25-21
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 27-21

ಕೋಲಾರ: 28-22
ತುಮಕೂರು: 27-22
ಉಡುಪಿ: 27-24
ಕಾರವಾರ: 28-27
ಚಿಕ್ಕಮಗಳೂರು: 22-19
ದಾವಣಗೆರೆ: 27-23

ಹುಬ್ಬಳ್ಳಿ: 26-23
ಚಿತ್ರದುರ್ಗ: 27-22
ಹಾವೇರಿ: 26-23
ಬಳ್ಳಾರಿ: 30-24
ಗದಗ: 26-22
ಕೊಪ್ಪಳ: 28-23

ರಾಯಚೂರು: 31-24
ಯಾದಗಿರಿ: 30-24
ವಿಜಯಪುರ: 29-24
ಕಲಬುರಗಿ: 29-24
ಬಾಗಲಕೋಟೆ: 28-23
