ಬೆಂಗಳೂರು: ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ (Basavaraj Horatti) ಅವರಿಂದ ಬಲವಂತವಾಗಿ ರಾಜೀನಾಮೆ ಕೊಡಿಸಲಾಗಿದೆ. ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಸಬಾರದು ಎಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ (BJP Delegation) ದೂರು ಸಲ್ಲಿಸಿದೆ.
ಛಲವಾದಿ ನಾರಾಯಣಸ್ವಾಮಿ, ಶರವಣ ನೇತೃತ್ವದಲ್ಲಿ ಲೋಕಭವನಕ್ಕೆ ತೆರಳಿದ ಬಿಜೆಪಿ-ಜೆಡಿಎಸ್ ನಿಯೋಗ, ಹೊರಟ್ಟಿ ಅವರ ರಾಜೀನಾಮೆ ಅಂಗೀಕರಿಸದಂತೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ. ಇದನ್ನೂ ಓದಿ: ಅಸಮಾಧಾನದಿಂದಲೇ ಸಿಎಂ ಮನೆಯಿಂದ ಹೊರನಡೆದ ಬಸವರಾಜ ಹೊರಟ್ಟಿ; ಅವಿಶ್ವಾಸ ನಿರ್ಣಯದ ಸವಾಲು
ಸದನ ನಡಾವಳಿ ಪ್ರಕಾರ ರಾಜೀನಾಮೆ ಸಲ್ಲಿಕೆ ಆಗಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದೆ. ಕಾಂಗ್ರೆಸ್ ಲೆಟರ್ಹೆಡ್ನಲ್ಲಿ ಸಭಾಧ್ಯಕ್ಷ, ಸಭಾಪತಿಗಳ ಹೆಸರುಗಳ ಆಯ್ಕೆ ಬಗ್ಗೆಯೂ ರಾಜ್ಯಪಾಲರಿಗೆ ನಿಯೋಗ ದೂರು ಕೊಟ್ಟಿದೆ.
ರಾಜ್ಯಪಾಲರಿಗೆ ಹಂಗಾಮಿ ಸಭಾಪತಿ ಹೊರಟ್ಟಿ ಪತ್ರ
ಆಗಸ್ಟ್ 7 ರಂದು ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಬಿ.ಕೆ.ಹರಿಪ್ರಸಾದ್ ನೇತೃತ್ವದಲ್ಲಿ ತಮ್ಮ ಕೊಠಡಿಗೆ ಬಂದಿದ್ದ ನಾಯಕರು, ಇವತ್ತೇ ರಾಜೀನಾಮೆ ಕೊಡಬೇಕೆಂದು ಒತ್ತಡ ಹಾಕಿ ರಾಜೀನಾಮೆ ಪಡೆದರು ಎಂದು ರಾಜ್ಯಪಾಲರಿಗೆ ಪತ್ರ ಬೆರೆದು ಬಸವರಾಜ ಹೊರಟ್ಟಿ ಅವರು ವಿವರಣೆ ಕೊಟ್ಟಿದ್ದಾರೆ. ಇದನ್ನೂ ಓದಿ: ಗೂಂಡಾಗಿರಿ ಮಾಡಿ ಬಲವಂತವಾಗಿ ಹೊರಟ್ಟಿ ಬಳಿ ರಾಜೀನಾಮೆ ಕೊಡಿಸಿದ್ದಾರೆ: ಅಶೋಕ್ ಕಿಡಿ



