ಬೆಂಗಳೂರು: ಕರ್ನಾಟಕ ಸರ್ಕಾರವು (Karnataka Government) ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ (Gutkha and Pan Masala) ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ.

ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(a) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿಗಳು-2011 ರ ನಿಯಮ 2.3.4 ರ ಅಡಿಯಲ್ಲಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ಸಿಸಿಬಿ ರೇಡ್ ಮಾಡಿಸಿದ್ದು ನಾನೇ: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
ತಂಬಾಕು ಅಥವಾ ನಿಕೋಟಿನ್ ಅಂಶವನ್ನು ಪ್ರತ್ಯೇಕವಾಗಿ ಪ್ಯಾಕ್ ಮಾಡಿ, ನಂತರ ಗ್ರಾಹಕರು ಸುಲಭವಾಗಿ ಮಿಶ್ರಣ ಮಾಡಿ ಬಳಸುವಂತೆ ಮಾರಾಟ ಮಾಡುವ ಯಾವುದೇ ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ.
ಪ್ಯಾಕೆಟ್, ಸ್ಯಾಚೆಟ್ ಅಥವಾ ಯಾವುದೇ ಹೆಸರಿನಲ್ಲಿ ತಂಬಾಕು ಮತ್ತು ನಿಕೋಟಿನ್ ಮಿಶ್ರಿತ ಗುಟ್ಕಾ ಹಾಗೂ ಪಾನ್ ಮಸಾಲಾಗಳನ್ನು ರಾಜ್ಯದಾದ್ಯಂತ ಮಾರಾಟ ಮಾಡುವುದು ಸಂಪೂರ್ಣವಾಗಿ ಶಿಕ್ಷಾರ್ಹ ಅಪರಾಧವಾಗಿದೆ.
