ಬೆಂಗಳೂರು: ಸ್ನಾತಕೋತ್ತರ ದಂತ ವೈದ್ಯಕೀಯ ಪದವಿ ಕೋರ್ಸ್ (MDS Course) ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತನ್ನ ವೆಬ್ಸೈಟ್ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ.

#PGDental-26: ರಾಜ್ಯದಲ್ಲಿನ ಸ್ನಾತಕೋತ್ತರ ದಂತ ವೈದ್ಯಕೀಯ ಪದವಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು KEA ತನ್ನ ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆ ದಿನ. ಶುಲ್ಕ ಪಾವತಿಸಲು ಆ. 18 ಕೊನೆ ದಿನ.#MDS-NEET ನಲ್ಲಿ ನಿಗದಿಪಡಿಸಿರುವ ಕನಿಷ್ಠ ಅಂಕಗಳನ್ನು ಅಥವಾ ಅದಕ್ಕಿಂತ ಹೆಚ್ವು… pic.twitter.com/fWF7osYyK9
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) August 14, 2026
ಎಂಡಿಎಸ್ ನೀಟ್ ಪರೀಕ್ಷೆಯಲ್ಲಿ ನಿಗದಿಪಡಿಸಿರುವ ಕನಿಷ್ಠ ಅಂಕ ಹಾಗೂ ಅದಕ್ಕಿಂತ ಹೆಚ್ಚು ಅಂಕ ಪಡೆದಿರುವವರು ನೋಂದಣಿ ಮಾಡಿಕೊಂಡು ಆಗಸ್ಟ್ 17ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಇದನ್ನೂ ಓದಿ: ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್; 170 ಕೋಟಿ ವೇತನ ಹಿಂಬಾಕಿ ಬಿಡುಗಡೆ
ಶುಲ್ಕ ಪಾವತಿಸಲು ಆ. 18 ಕೊನೆ ದಿನವಾಗಿದೆ. ಹೆಚ್ವಿನ ವಿವರಗಳಿಗೆ ಕೆಇಎ ವೆಬ್ ಸೈಟ್ ನೋಡಲು ಅವರು ಸಲಹೆ ನೀಡಿದ್ದಾರೆ.
