ಚಂಡೀಗಢ: ರಜೆ ಮೇಲೆ ಮನೆಗೆ ಬಂದಿದ್ದ ಗಡಿ ಭದ್ರತಾ ಪಡೆ ಯೋಧನೊಬ್ಬ (BSF Jawan) ತನ್ನ ಪತ್ನಿಯನ್ನು ಹತ್ಯೆ ಮಾಡಿ, ಆಕೆ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾಳೆ ಎಂದು ಬಿಂಬಿಸಲು ಯತ್ನಿಸಿರುವ ಘಟನೆ ಪಂಜಾಬ್‌ನ (Punjab) ಹೋಶಿಯಾರ್‌ಪುರ (Hoshiarpur) ಜಿಲ್ಲೆಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ರಾಮಾ ಎಂದು ಗುರುತಿಸಲಾಗಿದೆ. ಸುಮಾರು 12 ವರ್ಷಗಳ ಹಿಂದೆ ವಿವಾಹವಾಗಿದ್ದ ಈ ದಂಪತಿಗೆ ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ. ರಾಮಾ ಕುಟುಂಬದವರು ನೀಡಿರುವ ದೂರಿನ ಪ್ರಕಾರ, ಆಕೆಯ ಪತಿ ಅಮರ್ಜಿತ್ ಸಿಂಗ್ ಆಗಸ್ಟ್ 13ರ ರಾತ್ರಿ ರಜೆ ಮೇಲೆ ಮನೆಗೆ ಮರಳಿದ್ದ. ಬಳಿಕ ಮನೆಯಲ್ಲಿ ರಾಮಾಳ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ತೀವ್ರ ಗಾಯಗಳಿಂದ ರಾಮಾ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ದಿಮಾಗಿ ನಕ್ಸಲರು ಯಾರು? ಶಾರ್ಜಿಲ್ ಇಮಾಮ್ ಭಾಷಣದ ವಿಡಿಯೋ ಹಾಕಿ ಪಟ್ಟಿ ಬಿಡುಗಡೆ ಮಾಡಿದ ಕಿರಣ್ ರಿಜಿಜು
ಆಗಸ್ಟ್ 14ರ ಮುಂಜಾನೆ ಸುಮಾರು 4 ಗಂಟೆಗೆ ರಾಮಾ ಮನೆಯ ಮಹಡಿಯಿಂದ ಬಿದ್ದು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಕೆಯ ಕುಟುಂಬಕ್ಕೆ ಮಾಹಿತಿ ನೀಡಲಾಗಿತ್ತು. ಕುಟುಂಬಸ್ಥರು ಆಸ್ಪತ್ರೆಗೆ ತೆರಳಿದಾಗ ರಾಮಾ ಮೃತಪಟ್ಟಿರುವುದು ತಿಳಿದುಬಂದಿದೆ. ಆದರೆ ರಾಮಾ ಅವರ ದೇಹವನ್ನು ಗಮನಿಸಿದ ಕುಟುಂಬಸ್ಥರಿಗೆ ಹಲವು ಗಾಯದ ಗುರುತುಗಳು ಕಂಡುಬಂದಿವೆ. ಇದರಿಂದ ಆಕೆಯ ಮೇಲೆ ಹಲ್ಲೆ ನಡೆಸಿ ಬಳಿಕ ಮೃತಪಟ್ಟಿರುವ ಶಂಕೆ ವ್ಯಕ್ತಪಡಿಸಿ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಯುವಕನಿಗೆ ಸಿಕ್ತು 98 ಕೋಟಿ ರೂ. ಮೌಲ್ಯದ ನಿಧಿ!
ಮಹಡಿಯಿಂದ ಬಿದ್ದಿದ್ದಾಳೆ ಎಂಬ ಕಥೆಯನ್ನು ಸೃಷ್ಟಿಸಿ ನಿಜವಾದ ಘಟನೆಯನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗಿದೆ ಎಂದು ರಾಮಾ ಕುಟುಂಬಸ್ಥರು ಆರೋಪಿಸಿದ್ದಾರೆ. ರಾಮಾ ಅವರ ತಂದೆ ರಾಮ್ ಚಂದ್, ಮದುವೆಯಾದ ಬಳಿಕದಿಂದಲೇ ತಮ್ಮ ಮಗಳಿಗೆ ಪತಿಯಿಂದ ಕಿರುಕುಳ ಹಾಗೂ ದೈಹಿಕ ಹಲ್ಲೆ ನಡೆಯುತ್ತಿತ್ತು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮೂವರು ಎನ್‌ಕೌಂಟರ್ ಕೇಸ್; ಕುಟುಂಬಸ್ಥರಿಗೆ 15 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ ಭರವಸೆ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಮರ್ಜಿತ್ ಸಿಂಗ್, ಆತನ ಚಿಕ್ಕಪ್ಪ ಕುಲದೀಪ್ ಕುಕಿ ಹಾಗೂ ಚಿಕ್ಕಮ್ಮ ಸೋನಿಯಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಮರ್ಜಿತ್ ಸಿಂಗ್‌ನನ್ನು ಪೊಲೀಸರು ಬಂಧಿಸಿದ್ದು, ಉಳಿದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ ನೌಕಾಪಡೆ ಸಿಬ್ಬಂದಿ, ಪತ್ನಿ, ಇಬ್ಬರು ಮಕ್ಕಳು ಶವವಾಗಿ ಪತ್ತೆ
ಘಟನೆ ಕುರಿತು ತನಿಖೆ ಮುಂದುವರಿದಿದೆ ಎಂದು ಠಾಣಾಧಿಕಾರಿ ಹಪ್ರೀðತ್ ಸಿಂಗ್ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ರಾಮಾ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ‘ರಾಮಾಯಣ’ದಲ್ಲಿ ರಾವಣನ ಪಾತ್ರವನ್ನೇ ಆಯ್ಕೆ ಮಾಡಿದ್ದು ಯಾಕೆ? ಯಶ್ ಬಿಚ್ಚಿಟ್ಟ ಸೀಕ್ರೆಟ್
