ನವದೆಹಲಿ: ಮುಂಬರುವ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಬಿಜೆಪಿಯಲ್ಲಿ ಭರ್ಜರಿ ಸರ್ಜರಿ ನಡೆದಿದೆ. ನಿತಿನ್ ನಬಿನ್ ನೇತೃತ್ವದ ಬಿಜೆಪಿ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದೆ. ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ಹುದ್ದೆಗಳಿಗೆ ಹಲವು ಪ್ರಮುಖ ನಾಯಕರನ್ನು ನೇಮಕ ಮಾಡಲಾಗಿದೆ. ಈ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರ ಪಟ್ಟಿಯಲ್ಲಿ ಕರ್ನಾಟಕದ ರಾಜ್ಯಸಭಾ ಸದಸ್ಯ ಪ್ರೊ. ಎಂ. ನಾಗರಾಜ ಅವರಿಗೆ ಸ್ಥಾನ ನೀಡಲಾಗಿದೆ. ಇದರೊಂದಿಗೆ ಮಾಜಿ ಮುಖ್ಯಮಂತ್ರಿಗಳಾದ ವಸುಂಧರಾ ರಾಜೇ ಸಿಂಧಿಯಾ (ರಾಜಸ್ಥಾನ), ತೀರಥ್ ಸಿಂಗ್ ರಾವತ್ (ಉತ್ತರಾಖಂಡ) ಸೇರಿದಂತೆ ರಾಮ್ ಮಾಧವ್, ಬೈಜಯಂತ್ ಜಯ ಪಾಂಡಾ, ಡಿ. ಪುರಂದೇಶ್ವರಿ, ರೇಖಾ ವರ್ಮಾ, ವರ್ಷಾಬೆನ್ ನರೇಂದ್ರಭಾಯ್ ದೋಷಿ, ಡಾ. ಭಾರತಿ ಪ್ರವೀಣ್ ಪವಾರ್, ಮನ್‌ಪ್ರೀತ್ ಸಿಂಗ್ ಬಾದಲ್, ಲಾಲ್ ಸಿಂಗ್ ಆರ್ಯ, ಪ್ರೊ. ತಾರಿಖ್ ಮನ್ಸೂರ್ ಹಾಗೂ ಡಾ. ಮಧುಚಂದ್ರಾ ಕರ್ ಅವರು ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
भारतीय जनता पार्टी की राष्ट्रीय टीम के सभी नवनियुक्त पदाधिकारियों को हार्दिक बधाई एवं शुभकामनाएं।
अनुभव और ऊर्जा से समृद्ध यह टीम आदरणीय प्रधानमंत्री श्री @narendramodi जी के मार्गदर्शन में संगठन को नई गति प्रदान करेगी। मुझे पूर्ण विश्वास है कि टीम के सभी सदस्य, कार्यकर्ता भाव… pic.twitter.com/bvSxIZIRtW
— Nitin Nabin (@NitinNabin) August 17, 2026
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಜವಾಬ್ದಾರಿಯನ್ನು ಬಿ. ಎಲ್. ಸಂತೋಷ್ ಅವರಿಗೆ ವಹಿಸಲಾಗಿದ್ದು ಅವರು ಅದೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ರಾಷ್ಟ್ರೀಯ ಸಹ ಪ್ರಧಾನ ಕಾರ್ಯದರ್ಶಿಗಳಾಗಿ (ಸಂಘಟನೆ) ಶಿವಪ್ರಕಾಶ್ ಹಾಗೂ ಸೌದಾನ್ ಸಿಂಗ್ ಕಾರ್ಯನಿರ್ವಹಿಸಲಿದ್ದಾರೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಲ್ಲಿ ವಿನೋದ್ ತಾವ್ಡೆ, ಸುನಿಲ್ ಬನ್ಸಲ್, ತ್ರಿಪುರದ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್, ಸ್ಮೃತಿ ಇರಾನಿ, ಡಾ. ಸತೀಶ್ ಪೂನಿಯಾ, ಗಜೇಂದ್ರ ಪಟೇಲ್, ಹರೀಶ್ ದ್ವಿವೇದಿ ಹಾಗೂ ಸಂಜಯ್ ಭಾಟಿಯಾ ಸ್ಥಾನ ಪಡೆದಿದ್ದಾರೆ.
ನಬಿನ್ ಟೀಮ್ ನಲ್ಲಿ ನಾರಿ ಶಕ್ತಿ
ಆಪ್‌ನಿಂದ ಬಂದ ಸಂದೀಪ್ ಪಾಠಕ್ ಗೆ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. ಬಹಳ ಮುಖ್ಯವಾಗಿ ಒಟ್ಟು 13 ರಲ್ಲಿ 6 ಮಂದಿ ಮಹಿಳಾ ನಾಯಕಿಯರನ್ನೇ ಉಪಾಧ್ಯಕ್ಷರನ್ನಾಗಿ ನಬಿನ್ ತಂಡಕ್ಕೆ ಆಯ್ಕೆ ಮಾಡಲಾಗಿದೆ.

