ಪಾಟ್ನಾ: ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಹಾಸಿಗೆಯ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಿಹಾರದ (Bihar) ನವಾಡಾ (Nawada) ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ನಡೆದ ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸರು ಕೊಲೆ ಹಾಗೂ ಆತ್ಮಹತ್ಯೆ ಎರಡೂ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮೃತ ಮಹಿಳೆಯನ್ನು ನಿದಾ ಖಾತೂನ್ (37) ಎಂದು ಗುರುತಿಸಲಾಗಿದೆ. ಅವರ ನಾಲ್ಕು ವರ್ಷದ ಪುತ್ರಿ ಸರಿಯಾ ಖಾತೂನ್ ಹಾಗೂ ಎರಡು ವರ್ಷದ ಪುತ್ರಿ ಸಿದ್ರಾ ಖಾತೂನ್ ಹಾಸಿಗೆಯ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿ ಭಿಕ್ಷೆ ಬೇಡಬೇಡಿ: ತನ್ನ ನಾಗರಿಕರಿಗೆ ಪಾಕ್ ಖಡಕ್ ಎಚ್ಚರಿಕೆ
ಪೊಲೀಸರ ಪ್ರಕಾರ, ನಿದಾ ಖಾತೂನ್ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದೇ ಕೋಣೆಯ ಹಾಸಿಗೆಯ ಮೇಲೆ ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ಮೂವರು ಮೃತಪಟ್ಟಿರುವ ರೀತಿಯು ಅನುಮಾನಾಸ್ಪದವಾಗಿರುವ ಹಿನ್ನೆಲೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಮೂವರ ಸಾವಿಗೂ ಕೊಲೆಯೇ ಕಾರಣವಾಗಿರಬಹುದೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ನಿದಾ ಅವರ ಸಾವು ಆತ್ಮಹತ್ಯೆಯೇ ಅಥವಾ ಅವರನ್ನು ಹತ್ಯೆ ಮಾಡಿ ಬಳಿಕ ನೇಣು ಹಾಕಲಾಗಿದೆಯೇ ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್ – ಆಸ್ತಿ, ಪ್ರಿಯಕರನಿಗಾಗಿ ತಂದೆಯನ್ನೇ ಕೊಲೆಗೈದ ಮಗಳು
ನಿದಾ ಅವರ ದೇಹದ ಕೆಲವು ಭಾಗಗಳು ಹಾಸಿಗೆಯನ್ನು ಸ್ಪರ್ಶಿಸುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಅವರನ್ನು ಮೊದಲು ಹತ್ಯೆ ಮಾಡಿ ಬಳಿಕ ಮೃತದೇಹವನ್ನು ನೇಣಿಗೆ ಹಾಕಿರುವ ಸಾಧ್ಯತೆಯ ಬಗ್ಗೆಯೂ ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಮನೆಯ ಕೋಣೆಯ ಬಾಗಿಲು ಬಹಳ ಸಮಯದಿಂದಲೂ ಒಳಗಿನಿಂದ ಮುಚ್ಚಿದ್ದನ್ನು ಕುಟುಂಬ ಸದಸ್ಯರು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಕಿಟಕಿಯ ಮೂಲಕ ನೋಡಿದಾಗ, ಇಬ್ಬರು ಮಕ್ಕಳು ಹಾಸಿಗೆಯ ಮೇಲೆ ಮೃತಪಟ್ಟಿರುವುದು ಹಾಗೂ ನಿದಾ ನೇಣು ಬಿಗಿದ ಸ್ಥಿತಿಯಲ್ಲಿ ಇರುವುದು ಕಂಡುಬಂದಿದೆ. ಇದನ್ನೂ ಓದಿ: ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು – ಡಿಸಿ ಕಚೇರಿ ಮುತ್ತಿಗೆಗೆ BJP ಕಾರ್ಯಕರ್ತರ ಯತ್ನ; 40 ಮಂದಿ ವಿರುದ್ಧ FIR
ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನೂ ದೃಢಪಟ್ಟಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಮಕ್ಕಳ ಸಾವಿನ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಚಿಕ್ಕಬಾಣಾವರದಲ್ಲಿ ಡಬಲ್ ಮರ್ಡರ್ ಪ್ರಕರಣ – ಪ್ರಿಯಕರನೊಂದಿಗೆ ಸೇರಿ ಪತ್ನಿಯಿಂದಲೇ ಗಂಡ, ಮಗನ ಕೊಲೆ
ನಿದಾ ಅವರ ಪತಿ ಮೊಹಮ್ಮದ್ ಶಾಹಿದ್ ಕಳೆದ ಒಂದು ವರ್ಷದಿಂದ ಸೌದಿ ಅರೇಬಿಯಾದಲ್ಲಿ ವಾಸಿಸುತ್ತಿದ್ದು, ಅಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ. ನಿದಾ ಅವರು ತಮ್ಮ ಇಬ್ಬರು ಮಕ್ಕಳೊಂದಿಗೆ ಅತ್ತೆ-ಮಾವನ ಮನೆಯಲ್ಲಿ ವಾಸಿಸುತ್ತಿದ್ದರು. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಮೂವರ ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ವಿಧಿವಿಜ್ಞಾನ ತಜ್ಞರು ಪರಿಶೀಲನೆ ನಡೆಸಿದ ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: 2029ರ ಲೋಕಸಭಾ ಚುನಾವಣೆಗೆ ಮೋದಿ ಬೆಂಬಲಿಸಲು ಸರ್ಕಾರಿ ಹುದ್ದೆಗೆ ಪೊಲೀಸ್ ಕಾನ್‌ಸ್ಟೆಬಲ್ ರಾಜೀನಾಮೆ
ಸದ್ಯ ಪೊಲೀಸರು ಕುಟುಂಬ ಸದಸ್ಯರು ಹಾಗೂ ಸಂಬಂಧಿಕರಿಂದ ಮಾಹಿತಿ ಕಲೆಹಾಕುತ್ತಿದ್ದು, ಘಟನೆಯ ಹಿಂದಿರುವ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರದಲ್ಲಿ ಮೂವರ ಎನ್‌ಕೌಂಟರ್ ಕೇಸ್ – ಅರಣ್ಯಾಧಿಕಾರಿಗಳಿಂದ ವಸ್ತು ಜಪ್ತಿ, ಹಲವು ಅನುಮಾನ

