ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Modi) ಹಾಗೂ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ.ಕಿಶನ್ ರೆಡ್ಡಿಗೆ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ (G.Parameshwara) ಪತ್ರ ಬರೆದಿದ್ದಾರೆ. 2026ರ ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರವು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಖನಿಜ ಹಕ್ಕುಗಳು ಮತ್ತು ಖನಿಜ ಸಮೃದ್ಧ ಭೂಮಿಗಳ ಮೇಲೆ ತೆರಿಗೆ ವಿಧಿಸುವ ರಾಜ್ಯಗಳ ಸಾಂವಿಧಾನಿಕ ಅಧಿಕಾರವನ್ನು ನಿರ್ಬಂಧಿಸುವ ಮಸೂದೆಯ ನಿಬಂಧನೆಗಳಿಗೆ ಪರಮೇಶ್ವರ್ ಅಸಮಾಧಾನ ರಾಜ್ಯ ಪಟ್ಟಿಯ 49 ಮತ್ತು 50 ನೇ ನಮೂದುಗಳ ಅಡಿಯಲ್ಲಿ ರಾಜ್ಯಗಳ ಶಾಸಕಾಂಗ ಮತ್ತು ಹಣಕಾಸು ಅಧಿಕಾರಗಳನ್ನು ದೃಢಪಡಿಸುವ ಸುಪ್ರೀಂ ಕೋರ್ಟ್‌ನ 2024 ರ ಮಹತ್ವದ ತೀರ್ಪನ್ನು ಅವರು ಉಲ್ಲೇಖಿಸಿದ್ದಾರೆ. ಏಕಪಕ್ಷೀಯ ನಿಲುವು ಭಾರತದ ಒಕ್ಕೂಟ ರಚನೆಗೆ ಗಂಭೀರ ಕಳವಳಕಾರಿ ವಿಷಯವಾಗಿದೆ ಎಲ್ಲಾ ರಾಜ್ಯ ಸರ್ಕಾರಗಳೊಂದಿಗೆ ಅರ್ಥಪೂರ್ಣ ಸಮಾಲೋಚನೆ ನಡೆಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: KPSC ಅಕ್ರಮ ನೇಮಕಾತಿ ಕೇಸ್; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಮೇಲೆ ಇಡಿ ದಾಳಿ
ರಾಷ್ಟ್ರೀಯ ಖನಿಜ ಹಿತಾಸಕ್ತಿ ಮತ್ತು ರಾಜ್ಯಗಳ ಹಣಕಾಸು ಸ್ವಾಯತ್ತತೆ ಎರಡನ್ನೂ ರಕ್ಷಿಸುವ ಒಕ್ಕೂಟ ಸಹಕಾರದ ತತ್ವವನ್ನು ಎತ್ತಿಹಿಡಿಯಬೇಕು ಮತ್ತು ಒಮ್ಮತ ಆಧಾರಿತ ಚೌಕಟ್ಟನ್ನು ರೂಪಿಸಬೇಕು ಎಂದು ಪತ್ರದಲ್ಲಿ ಡಿಸಿಎಂ ಮನವಿ ಮಾಡಿದ್ದಾರೆ.

