ರಾಮನಗರ: ಬಿಡದಿ ಟೌನ್‌ಶಿಪ್ (Bidadi Township) ಯೋಜನೆಗೆ ಭೂಮಿ ನೀಡಲು ನಿರಾಕರಿಸಿ ಕಳೆದ 530 ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿರುವ ರೈತರ ಹೋರಾಟ ಈಗ ಮತ್ತಷ್ಟು ತೀವ್ರಗೊಂಡಿದೆ. ಸರ್ಕಾರದ ಕಡೆಯಿಂದ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆ, ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬೃಹತ್ ವಿಧಾನಸೌಧ ಚಲೋ (Vidhana Soudha Chalo) ಹೋರಾಟಕ್ಕೆ ರೈತರು ಸಜ್ಜಾಗಿದ್ದಾರೆ.
ಈ ಬಗ್ಗೆ ರೈತ ಮುಖಂಡರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಆಗಸ್ಟ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ ಸಾವಿರಾರು ರೈತರು ವಿಧಾನಸೌಧ ಮುತ್ತಿಗೆ ಹಾಕಲಿದ್ದಾರೆ. ಇನ್ಮುಂದೆ ನಮ್ಮ ಪ್ರತಿಭಟನಾ ಸ್ಥಳವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಸ್ಥಳಾಂತರಿಸಿ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಐಫೋನ್ EMI ವಿಚಾರಕ್ಕೆ ದುರಂತ – ತಾಯಿ ಕಾಲಿಗೆ ಬಿದ್ದರೂ ಕೇಳಲಿಲ್ಲ, ತಾಳಿಯನ್ನೇ ಬಿಚ್ಚಿಕೊಟ್ಟರೂ ಕರಗಲಿಲ್ಲ ಮಗ
ಬಿಡದಿ ಟೌನ್‌ಶಿಪ್ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡುವವರೆಗೆ ಹಾಗೂ ಜಿಬಿಡಿಎ ರದ್ದಾಗುವವರೆಗೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧಾರ ಮಾಡಲಾಗಿದೆ. ರೈತರಿಗೆ ಬೆದರಿಕೆ ಹಾಕಿ, ಮಾನಸಿಕ ಕಿರುಕುಳ ನೀಡಿ ಬಲವಂತವಾಗಿ ಜಿಬಿಡಿಎ ಚೆಕ್‌ಗಳನ್ನು ವಿತರಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ನಮ್ಮ ಫಲವತ್ತಾದ ಭೂಮಿಯನ್ನು ಬಿಟ್ಟುಕೊಡುವುದಿಲ್ಲ, ಪ್ರಾಣ ಹೋದರೂ ಜಮೀನು ನೀಡಲ್ಲ. ಈ ಬೃಹತ್ ಹೋರಾಟಕ್ಕೆ ವಿವಿಧ ಪ್ರಗತಿಪರ ಚಿಂತಕರು, ಕಾರ್ಮಿಕ ಸಂಘಟನೆಗಳು ಹಾಗೂ ಹಲವಾರು ರೈತಪರ ಒಕ್ಕೂಟಗಳು ಬೆಂಬಲ ಸೂಚಿಸಿದೆ ಎಂದು ರೈತ ಮುಖಂಡ ಪ್ರಕಾಶ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಿರಿಯಾನಿ ಪಾತ್ರೆಯಲ್ಲಿತ್ತು ತುಂಡರಿಸಿದ ಮಹಿಳೆಯ ದೇಹದ ಭಾಗಗಳು – ಬೆನ್ನತ್ತಿದ ಪೊಲೀಸರಿ ಸಿಕ್ಕಿದ್ದು ಚೆನ್ನೈ ‘ಹಾರರ್ ಹೌಸ್’!
