ಮಂಡ್ಯ: ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗು (Kodagu) ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ (KRS Dam) ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ನಿನ್ನೆ ಬೆಳಗ್ಗೆ 9,438 ಕ್ಯೂಸೆಕ್ ಇದ್ದ ಒಳಹರಿವು, ನಿರಂತರ ಮಳೆಯಿಂದಾಗಿ(Rain) ಇಂದು ಏಕಾಏಕಿ 17,427 ಕ್ಯೂಸೆಕ್ಗೆ ಹೆಚ್ಚಳವಾಗಿದೆ. ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಅಣೆಕಟ್ಟೆಯಲ್ಲಿ ನೀರಿನ ಮಟ್ಟವು ನಿರಂತರವಾಗಿ ಏರಿಕೆಯಾಗುತ್ತಿದ್ದು, ನದಿ ಪಾತ್ರದ ರೈತರಲ್ಲಿ ಸಂತಸ ಮೂಡಿಸಿದೆ. ಇದನ್ನೂ ಓದಿ: ನೇಪಾಳ ಜಲಪ್ರಳಯಕ್ಕೆ 160 ಮಂದಿ ಬಲಿ – 150 ಕಿ.ಮೀ ದೂರದಲ್ಲಿ 33 ಶವ ಪತ್ತೆ
ಕೆಆರ್ಎಸ್ ಜಲಾಶಯದ ಇಂದಿನ ನೀರಿನ ಮಟ್ಟದ ವಿವರ
ಗರಿಷ್ಠ ಮಟ್ಟ: 124.80 ಅಡಿ
ಇಂದಿನ ನೀರಿನ ಮಟ್ಟ: 109.75 ಅಡಿ
ಒಳಹರಿವು: 17,427 ಕ್ಯೂಸೆಕ್
ಹೊರಹರಿವು: 4,514 ಕ್ಯೂಸೆಕ್
ಗರಿಷ್ಠ ಸಂಗ್ರಹ ಸಾಮರ್ಥ್ಯ: 49.452 ಟಿಎಂಸಿ
ಇಂದಿನ ಒಟ್ಟು ನೀರು ಸಂಗ್ರಹ: 31.471 ಟಿಎಂಸಿ
ಸದ್ಯ ಅಣೆಕಟ್ಟೆಯಿಂದ ನದಿಗೆ ಹಾಗೂ ನಾಲೆಗಳಿಗೆ ಒಟ್ಟು 4,514 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಒಳಹರಿವು ಮತ್ತಷ್ಟು ಹೆಚ್ಚಾಗಲಿದೆ.
