ರಾಮನಗರ: ಕನಕಪುರ (Kanakapura) ತಾಲೂಕಿನ ಬಂಡೆಬಸಪ್ಪನದೊಡ್ಡಿ ಗ್ರಾಮದಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ (Short Circuit) ಮನೆಯೊಂದು (House) ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ.
ಗ್ರಾಮದ ನಿವಾಸಿ ಪರಮಶಿವಯ್ಯ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ. ತಡರಾತ್ರಿ ದಿಢೀರನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಮನೆಗೆ ಆವರಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ವಸ್ತುಗಳು ಹಾಗೂ ದಿನಬಳಕೆಯ ಸಾಮಗ್ರಿಗಳು ಸಂಪೂರ್ಣವಾಗಿ ನಾಶವಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ವಿಚಾರಣಾಧೀನ ಕೈದಿಗೆ ರಾಜಾತಿಥ್ಯ ಪ್ರಕರಣ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ಎತ್ತಂಗಡಿ
ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿಂದು ಕಾವೇರಿ ಕದನ – ಮಂಡ್ಯದಲ್ಲಿ ರೊಟ್ಟಿ ಚಳವಳಿ
