ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಅವರ ಸೋದರ ಸಂಬಂಧಿಯ ಪುತ್ರಿ ಬೃಷ್ಟಿ ಮುಖರ್ಜಿ(Bristy Mukherjee) ಅವರು ಬೀರ್‌ಭೂಮ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ
ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರ ಸೋದರಸಂಬಂಧಿ ನಿಹಾರ್ ಮುಖರ್ಜಿ(Nihar Mukherjee) ಅವರ ಪುತ್ರಿಯಾದ 28 ವರ್ಷದ ಬೃಷ್ಟಿ ಮುಖರ್ಜಿ, ತಮ್ಮ ಮನೆಯ ಎರಡನೇ ಮಹಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಿಹಾರ್ ಮುಖರ್ಜಿ ಅವರು ಮಮತಾ ಬ್ಯಾನರ್ಜಿ ಅವರ ತಾಯಿಯ ಸೋದರ ಸಂಬಂಧಿಯಾಗಿದ್ದು ತೃಣಮೂಲ ಕಾಂಗ್ರೆಸ್ ನಾಯಕರಾಗಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅವರ ಸಾವಿನ ಕುರಿತು ತನಿಖೆ ಆರಂಭಿಸಲಾಗಿದೆ. ಯುವತಿಯು ಕಳೆದ ಕೆಲ ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ತಮಿಳುನಾಡಿನ 52 ಪ್ರಮುಖ ದೇಗುಲಗಳಲ್ಲಿ ಮೊಬೈಲ್ ನಿಷೇಧ – ಫೋನ್ ಇಡಲು 5 ರೂ. ಶುಲ್ಕ
ಬೃಷ್ಟಿ ಮುಖರ್ಜಿ ಬೋಲ್‌ಪುರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೋಧಕೇತರ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಪ್ರಕರಣದಲ್ಲಿ ಸುಮಾರು 26,000 ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ವಜಾಗೊಳಿಸಲಾಗಿತ್ತು. ಈ ನೇಮಕಾತಿಗಳನ್ನು ಈ ಹಿಂದೆ ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿತ್ತು. ನಂತರ ಸುಪ್ರೀಂ ಕೋರ್ಟ್ ಕೂಡ ಆ ಆದೇಶವನ್ನು ಎತ್ತಿಹಿಡಿದಿತ್ತು.
