ಬೆಂಗಳೂರು: ನಟ ದುನಿಯಾ ವಿಜಯ್ (Dunia Vijay) ಅವರ ಪುತ್ರ ಸಾಮ್ರಾಟ್ ವಿಜಯ್ (Case on Samrat Vijay) ವಿರುದ್ಧ ಕಾಲೇಜು ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಘಟನೆ ಕುರಿತು ಗಾಯಾಳು ಮನೀಷ್ ಮಾತನಾಡಿದ್ದಾರೆ.
ಆರ್.ಆರ್. ನಗರದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಸಾಮ್ರಾಟ್ ವಿಜಯ್ ಅವರ ಕಾರನ್ನು ಓವರ್ಟೇಕ್ ಮಾಡಿದ್ದೇ ಜಗಳಕ್ಕೆ ಕಾರಣ ಎನ್ನಲಾಗಿದೆ. ಬಳಿಕ ಸಾಮ್ರಾಟ್ ಹಾಗೂ ಕೆಲವರು ಸಫಾರಿ ಕಾರಿನಲ್ಲಿ ಬಂದು ಮನೀಷ್ನನ್ನು ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಮಾತನಾಡಿರುವ ಬಿಬಿಎ ಮೊದಲ ವರ್ಷದ ವಿದ್ಯಾರ್ಥಿ ಮನೀಷ್, ʼಆರ್.ಆರ್. ನಗರದಲ್ಲಿ ಅವರ ಕಾರು ನಮ್ಮನ್ನು ಚೇಸ್ ಮಾಡಿತ್ತು. ನಾನು ಸ್ನೇಹಿತನ ಮನೆಯಿಂದ ನನ್ನ ಮನೆಗೆ ಹೋಗುತ್ತಿದ್ದೆ. ನಾನು ತಮಾಷಗೆ ಓವರ್ಟೇಕ್ ಮಾಡಿದ್ದು, ಉದ್ದೇಶಪೂರ್ವಕವಾಗಿ ಮಾಡಿರಲಿಲ್ಲ. ಆದರೆ, ಅವರು ಅದನ್ನು ಗಂಭೀರವಾಗಿ ತೆಗೆದುಕೊಂಡು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ – ‘ಸೇವಾ ಸಂಕಲ್ಪ’ ಅಭಿಯಾನಕ್ಕೆ ಬಿಜೆಪಿ ಸಿದ್ಧತೆ
ಈ ಕುರಿತು ಮಾತನಾಡಿದ ಮನೀಷ್ ಪರ ವಕೀಲರು, ಸಫಾರಿ ಕಾರಿನಲ್ಲಿ ಬಂದವರು ಮನೀಷ್ನನ್ನು ಕಿಡ್ನ್ಯಾಪ್ ಮಾಡಿ ಬಳಿಕ ಆರು ಮಂದಿ ಸೇರಿ ಹಲ್ಲೆ ನಡೆಸಿದ್ದಾರೆ. ಸಾಮ್ರಾಟ್ ವಿಜಯ್ ಸೇರಿದಂತೆ ಒಟ್ಟು ಏಳು ಮಂದಿಯ ವಿರುದ್ಧ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ದೂರು ಹಿನ್ನೆಲೆಯಲ್ಲಿ ಪೊಲೀಸರು ಸ್ಥಳ ಪರಿಶೀಲನೆ ಸೇರಿದಂತೆ ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ನಕಲಿ ಔಷಧಿ ದಂಧೆ – ಕಿಂಗ್ಪಿನ್ ಪ್ರಶಾಂತ್ ಕಸ್ಟಡಿಗೆ ಪಡೆಯಲು SIT ಸಜ್ಜು
