ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕ(US-Iran War) ನಡುವಿನ ಯುದ್ಧ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ವಿಶ್ವದ ಅತ್ಯಂತ ಆಯಕಟ್ಟಿನ ಸಮುದ್ರ ಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ‘ಟ್ರಂಪ್ ಸ್ಟ್ರೈಟ್’ ಎಂದು ಮರುನಾಮಕರಣ ಮಾಡಬೇಕೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಸಲಹೆ ನೀಡಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣ ಟ್ರೂತ್ ಸೋಶಿಯಲ್ನಲ್ಲಿ ಈ ಕುರಿತು ಬರೆದುಕೊಂಡಿರುವ ಟ್ರಂಪ್, “ಪ್ರಸ್ತುತ ಈ ಜಲಸಂಧಿ ಅಮೆರಿಕದ ನಿಯಂತ್ರಣದಲ್ಲಿದೆ. ಹೀಗಾಗಿ ಇದಕ್ಕೆ ‘ಟ್ರಂಪ್ ಸ್ಟ್ರೈಟ್’ ಎಂದು ಹೆಸರಿಡಬೇಕೇ?” ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಅಮೆರಿಕದಂತೆಯೇ ಈ ಜಲಮಾರ್ಗವೂ ಎಂದಿಗಿಂತಲೂ ಹೆಚ್ಚು ‘ಹಾಟ್’ (Hotter) ಆಗಿರಲಿದೆ ಎಂದು ಹೇಳಿಕೊಂಡಿದ್ದಾರೆ.

ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲಿನ ದಾಳಿಗೆ ಪ್ರತಿಯಾಗಿ ಅಮೆರಿಕ ಸೇನೆಯು ಇರಾನ್ನ ಎರಡು ಸರ್ಕಾರಿ ತೈಲ ಟ್ಯಾಂಕರ್ಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. ಟ್ಯಾಂಕರ್ಗೆ ಟ್ಯಾಂಕರ್ (Tanker for Tanker) ಎಂಬ ಹೊಸ ಕಾರ್ಯತಂತ್ರದ ಭಾಗವಾಗಿ ಇರಾನ್ ಕರಾವಳಿಯಲ್ಲಿದ್ದ ಹಡಗುಗಳ ಎಂಜಿನ್ ಕೊಠಡಿಗಳನ್ನು ಅಮೆರಿಕ ಧ್ವಂಸಗೊಳಿಸಿದೆ. ಇದನ್ನೂ ಓದಿ: ಅಮೆರಿಕ ವಿರುದ್ಧ ಇರಾನ್ ಪ್ರತೀಕಾರ – ಜೋರ್ಡಾನ್, ಬಹ್ರೇನ್ನಲ್ಲಿರೋ ಯುಎಸ್ ನೆಲೆಗಳ ಮೇಲೆ ಕ್ಷಿಪಣಿ ದಾಳಿ
ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಪಶ್ಚಿಮ ಏಷ್ಯಾದಲ್ಲಿರುವ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರಿ ದಾಳಿ ನಡೆಸಿದೆ. ಬಹ್ರೇನ್, ಕುವೈತ್ ಮತ್ತು ಜೋರ್ಡಾನ್ನಲ್ಲಿರುವ ಅಮೆರಿಕದ ಹಿತಾಸಕ್ತಿಗಳ ಮೇಲೆ ಇರಾನ್ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸುವ ಮೂಲಕ ‘ಕಠಿಣ ಶಿಕ್ಷೆ’ ವಿಧಿಸುವುದಾಗಿ ಎಚ್ಚರಿಸಿದೆ.
