ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಹೊರವಲಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ತಾಯಿಯೊಂದಿಗೆ ಮೂರು ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಟೋ – ಲಾರಿ ಮಧ್ಯೆ ಭೀಕರ ಅಪಘಾತ ನಡೆದು ಶರಣಮ್ಮ (30) ಎಂಬ ಮಹಿಳೆ ಮತ್ತು ಆಕೆಯ 3 ತಿಂಗಳ ಮಗು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ವಾಡಿ ಪಟ್ಟಣಕ್ಕೆ ಆಗಮಿಸುವ ವೇಳೆ ಆಟೋಗೆ ಲಾರಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಮತ್ತೊಂದು ʻಗೋಲ್ಡ್ ಸ್ಕ್ಯಾಮ್ʼ – 80ಕ್ಕೂ ಹೆಚ್ಚು ಜನರಿಗೆ ಉಂಡೆನಾಮ!

ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಅತ್ತೆ ಸಾಬಮ್ಮ, ಆಟೋ ಚಾಲಕ ಖಾಜಾ ಪಟೇಲ್ಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನೂ ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
