ಬೆಂಗಳೂರು: ಕೆಪಿಎಸ್ಸಿ ಭ್ರಷ್ಟಾಚಾರ (KPSC Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಸವರಾಜ್ ಕನ್ನಾಳೆ ಮನೆ ಮೇಲೆ ದಾಳಿ ನಡೆಸಿದ ವೇಳೆ 15 ಗ್ರೂಪ್ ಬಿ ಹಾಲ್ ಟಿಕೆಟ್ಗಳು ಪತ್ತೆಯಾಗಿವೆ.
ಪ್ರಕರಣದ ಸಂಬಂಧ ಸಿಐಡಿ ಅಧಿಕಾರಿಗಳು, ಬಸವರಾಜ್ ಕನ್ನಾಳೆ ಮನೆಯಲ್ಲಿ ಸಿಕ್ಕ ಸಾಕ್ಷ್ಯಗಳನ್ನು ನೋಡಿ ದಂಗಾಗಿದ್ದಾರೆ. ಶೋಧದ ವೇಳೆ ಬಸವರಾಜ್ ಮನೆಯಲ್ಲಿ ಬರೋಬ್ಬರಿ 15 ಪರೀಕ್ಷೆಗಳ ಹಾಲ್ ಟಿಕೆಟ್ಗಳು ಪತ್ತೆಯಾಗಿವೆ. ಕೇವಲ ಪಶು ವೈದ್ಯಾಧಿಕಾರಿ ಹುದ್ದೆ ಮಾತ್ರವಲ್ಲದೆ ಬಿ-ಗ್ರೂಪ್ ಹುದ್ದೆಗಳು ಹಾಗೂ ಕೆಎಎಸ್ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳೂ ಡೀಲ್ ಆಗಿರುವ ಸೀಕ್ರೆಟ್ ಅನುಮಾನ ಸಿಐಡಿಗೆ ಕಾಡುತ್ತಿದೆ.
ಕೆಎಎಸ್ ಪ್ರಿಲಿಮ್ಸ್, ಮೇನ್ಸ್ ಮತ್ತು ಸಂದರ್ಶನ ಹೀಗೆ ಮೂರೂ ಹಂತಗಳಿಗೆ ಒಂದೇ ಪ್ಯಾಕೇಜ್ ದರ ನಿಗದಿಪಡಿಸಿ ಅಕ್ರಮ ಎಸಗಿರುವ ಸಾಧ್ಯತೆಯಿದೆ. ಸದ್ಯ ಪಶು ವೈದ್ಯಾಧಿಕಾರಿ ಹುದ್ದೆಯ ಅಕ್ರಮ ತನಿಖೆ ಮುಗಿಯುತ್ತಿದ್ದಂತೆ, ಉಳಿದ ಪರೀಕ್ಷೆಗಳ ಹಗರಣದ ಜಾಡು ಹಿಡಿಯಲು ಸಿಐಡಿ ಮುಂದಾಗಿದೆ.ಇದನ್ನೂ ಓದಿ: ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಆರೋಪ ಮಾಡಿದ ಪೋಷಕರು
ರಾಜ್ಯ ಸರ್ಕಾರದಿಂದ ಹಸಿರು ನಿಶಾನೆ ಸಿಕ್ಕರೆ ಕೆಎಎಸ್ ಹುದ್ದೆಗಳ ನೇಮಕಾತಿ ಅಕ್ರಮದ ಕುರಿತು ಪೂರ್ಣ ಪ್ರಮಾಣದ ತನಿಖೆ ನಡೆಸಲು ಸಿಐಡಿ ಯೋಜಿಸಿದೆ.ಇದನ್ನೂ ಓದಿ: ಬೆಂಗಳೂರಿನ 100 ಹೋಟೆಲ್ಗಳಿಗೆ ಟ್ರೈನಿಂಗ್; ಎಫ್ಡಿಎ ದಾಳಿ ಬೆನ್ನಲ್ಲೇ ಅಸೋಸಿಯೇಷನ್ ನಿರ್ಧಾರ
