ಚಾಮರಾಜನಗರ: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆದ ಬೆಚ್ಚಿಬೀಳಿಸುವ ಘಟನೆ ಬೆನ್ನಲ್ಲೇ, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಅಮಾನವೀಯ ಬೇಟೆ ಪ್ರಕರಣ ಬೆಳಕಿಗೆ ಬಂದಿದೆ.
ಹನೂರು ವಲಯದ ಉಡುತೊರೆಹಳ್ಳ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ನೀರು ಕುಡಿಯಲು ಬಂದಿದ್ದ ಕಡವೆ ಮೇಲೆ ದುಷ್ಕರ್ಮಿಗಳು ನಾಡಬಂದೂಕಿನಿಂದ ಗುಂಡು ಹಾರಿಸಿ ಬೇಟೆಯಾಡಿದ್ದಾರೆ. ಇದನ್ನೂ ಓದಿ: KPSC Scam: ಕನ್ನಾಳೆ ಮನೆಯಲ್ಲಿ 15 ಗ್ರೂಪ್ ಬಿ ಹಾಲ್ ಟಿಕೆಟ್ ಪತ್ತೆ
ನಂತರ ಅದನ್ನು ಮೂರು ಭಾಗಗಳಾಗಿ ಕತ್ತರಿಸಿ ಚೀಲದಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಂಡು, ಆರೋಪಿಗಳು ಕಡವೆ ಮಾಂಸದ ಚೀಲಗಳನ್ನು ಸ್ಥಳದಲ್ಲೇ ಬಿಟ್ಟು ದಟ್ಟ ಅರಣ್ಯದಲ್ಲಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಬಫರ್ ವಲಯದ ವಲಯ ಅರಣ್ಯಾಧಿಕಾರಿ ಮಹೇಶ್ ಅವರು ಪ್ರಕರಣ ದಾಖಲಿಸಿಕೊಂಡು, ಪರಾರಿಯಾಗಿರುವ ಬೇಟೆಗಾರರ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಡಿಗ್ರಿಯಲ್ಲಿ ಎರೆಡೆರಡು ಬಾರಿ ಫೇಲ್ – ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ರ‍್ಯಾಂಕ್!
