ಬೆಂಗಳೂರು: ಕೆಪಿಎಸ್‌ಸಿ ಹಗರಣದಲ್ಲಿ ಬಂಧನಕ್ಕೊಳಗಾದ ಐಎಎಸ್ ಅಧಿಕಾರಿ ಗ್ಯಾನೇಂದ್ರಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.
ಸರ್ಕಾರಿ ಹುದ್ದೆ ಮತ್ತು ಕಚೇರಿಯ ದುರುಪಯೋಗ ಪಡಿಸಿಕೊಂಡ ಹಿನ್ನೆಲೆ ಈ ಪ್ರಕರಣ ದಾಖಲಿಸಲಾಗಿದೆ. ಹಣದ ಆಮೀಷದಿಂದ ಸರ್ಕಾರದ ಹುದ್ದೆಗೆ ಮೋಸ ಮಾಡಿದ ಹಿನ್ನೆಲೆಯಲ್ಲಿ ಎಫ್‌ಐಆರ್‌ನಲ್ಲಿ ಸಂಬಂಧಿತ ಸೆಕ್ಷನ್ ಸೇರಿಸಲಾಗಿದೆ. ಇದನ್ನೂ ಓದಿ: KPSC Scam: ಕನ್ನಾಳೆ ಮನೆಯಲ್ಲಿ 15 ಗ್ರೂಪ್ ಬಿ ಹಾಲ್ ಟಿಕೆಟ್ ಪತ್ತೆ
ಕೆಪಿಎಸ್‌ಸಿ ಕಚೇರಿಯಲ್ಲಿ ಸಿಐಡಿ ಅಧಿಕಾರಿಗಳು ಇಂದು (ಸೆ.3) ಮಹಜರು ನಡೆಸಿದರು. ಪ್ರಶ್ನೆಪತ್ರಿಕೆ ಲೀಕ್ ಆಗಿದ್ದ ಹಿನ್ನೆಲೆ ಗ್ಯಾನೇಂದ್ರ ಕೊಠಡಿಯಲ್ಲಿ ಮಹಜರು ನಡೆಸಲಾಗಿದೆ. ಬಳಿಕ ಗ್ಯಾನೇಂದ್ರ ಅವರನ್ನು ಸಿಐಡಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಡಿಗ್ರಿಯಲ್ಲಿ ಎರೆಡೆರಡು ಬಾರಿ ಫೇಲ್ – ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ರ‍್ಯಾಂಕ್!
