ಓಮನ್: ದೋಹಾದಿಂದ ಬೆಂಗಳೂರಿಗೆ (Doha-Bengaluru) ಬರುತ್ತಿದ್ದ ಇಂಡಿಗೋ 6E 1302 ವಿಮಾನ ಹಾರಾಟದಲ್ಲಿದ್ದಾಗಲೇ ಪೈಲಟ್‌ಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಕೂಡಲೇ ವಿಮಾನವನ್ನು ಮಸ್ಕತ್‌ಗೆ ತಿರುಗಿಸಿ (Muscat) ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ವರದಿಯಾಗಿದೆ.
ವಿಮಾನ ಹಾರಾಟದಲ್ಲಿದ್ದಾಗಲೇ ಪೈಲಟ್-ಇನ್-ಕಮಾಂಡ್ ಅಸ್ವಸ್ಥರಾಗಿದ್ದರು. ಅವರಿಗೆ ತಕ್ಷಣ ವೈದ್ಯಕೀಯ ಆರೈಕೆಯ ಅಗತ್ಯವಿತ್ತು. ಕೂಡಲೇ ಮಸ್ಕತ್‌ಗೆ ಸುರಕ್ಷಿತವಾಗಿ ವಿಮಾನವನ್ನು ಕಳುಹಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗೋವಾ ಆಗಸದಲ್ಲಿ ತಪ್ಪಿತು ಅವಘಡ – ದೆಹಲಿಗೆ ಟೇಕಾಫ್ ಆಗಿದ್ದ ಇಂಡಿಗೋ ವಿಮಾನದ ಒಂದು ಎಂಜಿನ್ ಆಫ್; ತಕ್ಷಣ ಯೂ ಟರ್ನ್

ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ನಿಲ್ದಾಣದಲ್ಲಿ ಪೈಲಟ್‌ಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಿ, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಅವರು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ.
ಪ್ರಯಾಣಿಕರನ್ನು ಬೆಂಗಳೂರಿಗೆ ಕಳುಹಿಸಲು ಇಂಡಿಗೋ ಪರ್ಯಾಯ ವಿಮಾನ ಮತ್ತು ಬೇರೆ ಸಿಬ್ಬಂದಿಯನ್ನು ವ್ಯವಸ್ಥೆ ಮಾಡಿದೆ. ಪ್ರಯಾಣಿಕರಿಗೆ ಉಪಹಾರ ಮತ್ತು ಅಗತ್ಯ ಸೌಲಭ್ಯ ಒದಗಿಸಲಾಗಿದೆ. ನಮ್ಮ ಗ್ರಾಹಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ನಮ್ಮ ಗ್ರಾಹಕರು, ಸಿಬ್ಬಂದಿ ಮತ್ತು ವಿಮಾನಗಳ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಬೆಂಗಳೂರಿಗೆ ಬರ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ – ಟಿಶ್ಯೂ ಪೇಪರ್‌ನಲ್ಲಿ ಬೆದರಿಕೆ ಪತ್ರ ಪತ್ತೆ
