ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ (Duniya Vijay) ಮತ್ತು ಅವರ ಮೊದಲ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕಾನೂನಾತ್ಮಕವಾಗಿ ತೆರೆಬಿದ್ದಿದೆ. ಇದರ ಬೆನ್ನಲ್ಲೇ ನಟ ವಿಜಯ್ ಭಾವುಕ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.
ಪೋಸ್ಟ್ ಹಂಚಿಕೊಂಡಿರುವ ಅವರು, ನನಗೆ ಎರಡು ಹೆಣ್ಣುಮಕ್ಕಳಿದ್ದು, ಅವರಿಗೆ ಯಾವುದೇ ರೀತಿಯಲ್ಲೂ ಮುಜುಗರವಾಗಬಾರದು. ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ ಹಾಕುತ್ತಿದ್ದೇನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಮಾಧ್ಯಮಗಳಲ್ಲಾಗಲಿ ಅಥವಾ ಸಾರ್ವಜನಿಕವಾಗಲಿ ಮಾತನಾಡಲು ಇಚ್ಛಿಸುವುದಿಲ್ಲ ಎಂದು ಕಳಕಳಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ದುನಿಯಾ ವಿಜಯ್ – ನಾಗರತ್ನ ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು; 2 ಕೋಟಿ ಜೀವನಾಂಶಕ್ಕೆ ಆದೇಶ
ಪೋಸ್ಟ್ನಲ್ಲಿ ಏನಿದೆ?
ಸಮಸ್ತ ಅಭಿಮಾನಿಗಳಲ್ಲಿ ಹಾಗೂ ನನ್ನ ಬದುಕಿನುದ್ದಕ್ಕೂ ಜೊತೆಯಾಗಿ ನಿಂತ ಮಾಧ್ಯಮ ಮಿತ್ರರಲ್ಲಿ ಕಳಕಳಿಯ ಮನವಿ.
ನ್ಯಾಯಾಲಯದ ಆದೇಶಕ್ಕೆ ಶಿರಸಾಷ್ಟಾಂಗ ಪ್ರಣಾಮಗಳೊಂದಿಗೆ ಶರಣಾಗಿದ್ದೇನೆ. ಕಾನೂನಿನ ಮೇಲಿನ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ. ನನ್ನ ಮೇಲಿನ ಮಾನಸಿಕ ಕ್ರೌರ್ಯವನ್ನು ಪರಿಗಣಿಸಿ, ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಡಿ.ಕೆ.ಸಿಂಗ್ ಹಾಗೂ ಶಾಂತಿಭೂಷಣ್ ಅವರ ಆದೇಶಕ್ಕೆ ತಲೆಬಾಗಿದ್ದೇನೆ. ಈ ಆದೇಶಕ್ಕೆ ನನ್ನ ಗೌರವಪೂರ್ವಕ ಧನ್ಯವಾದಗಳು. ಹಾಗೆಯೇ ನನ್ನ ವಕೀಲರಾದ ಹಿರಿಯ ಕೌನ್ಸಿಲ್ ಶ್ರೀವತ್ಸ ಹಾಗೂ ಯುಕ್ತ ಅನಿಲ್ ಅವರಿಗೆ ನನ್ನ ಹೃತ್ತೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಇದನ್ನೂ ಓದಿ:ಸ್ಪಾರ್ಕ್ ಚಿತ್ರದ ಮಧುರ ಮುಗುಳುನಗೆ ಹಾಡು ಬಿಡುಗಡೆ ಮಾಡಿದ ಉಪ್ಪಿ ತಾಯಿ

ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಮಾಧ್ಯಮಗಳಲ್ಲಾಗಲಿ ಅಥವಾ ಸಾರ್ವಜನಿಕವಾಗಲಿ ಮಾತನಾಡಲು ಇಚ್ಛಿಸುವುದಿಲ್ಲ. ನನ್ನ ಹೆಣ್ಣುಮಕ್ಕಳು ವಯಸ್ಕರಾಗಿದ್ದು, ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನ ಗಳಿಸಿದ್ದಾರೆ. ಅವರಿಗೆ ಯಾವುದೇ ಮುಜುಗರವಾಗಬಾರದು. ಮಕ್ಕಳ ಭವಿಷ್ಯ ಹಾಗೂ ಹಿತದೃಷ್ಟಿಯಿಂದ, ನನ್ನ ವೈಯಕ್ತಿಕ ಸಾಂಸಾರಿಕ ವಿಚಾರಕ್ಕೆ ನ್ಯಾಯಾಲಯ ನೀಡಿದ ಆದೇಶವನ್ನು ಆತ್ಮಸಾಕ್ಷಿಯಿಂದ ಸ್ವೀಕರಿಸಿದ್ದು, ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ ಹಾಕುತ್ತಿದ್ದೇನೆ. ನಿಮ್ಮ ಆಶೀರ್ವಾದ ಮತ್ತು ಹಾರೈಕೆ ಹೀಗೆಯೇ ಇರಲಿ ಎಂದು ಬರೆದುಕೊಂಡಿದ್ದಾರೆ.
ಕೋರ್ಟ್ನಲ್ಲಿ ಆಗಿದ್ದೇನು?
ಹಲವು ವರ್ಷಗಳಿಂದ ಕೋರ್ಟ್ ಅಂಗಳದಲ್ಲಿದ್ದ ವಿಚ್ಛೇದನ ಪ್ರಕರಣವನ್ನ ಇತ್ಯರ್ಥಪಡಿಸಿರುವ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ, ದಂಪತಿಗೆ ಅಧಿಕೃತವಾಗಿ ವಿಚ್ಛೇದನ ಮಂಜೂರು ಮಾಡಿದೆ. ಕ್ರೌರ್ಯದ ಆಧಾರದ ಮೇಲೆ ನಟ ದುನಿಯಾ ವಿಜಯ್ ಹಾಗೂ ಪತ್ನಿ ನಾಗರತ್ನಾ ಅವರಿಗೆ ವಿಭಾಗೀಯ ಪೀಠ ಡಿವೋರ್ಸ್ ಮಂಜೂರು ಮಾಡಿದ್ದು, ಪತ್ನಿಗೆ 2 ಕೋಟಿ ರೂ. ಜೀವನಾಂಶ ನೀಡಲು ಆದೇಶಿಸಿದೆ.ಇದನ್ನೂ ಓದಿ: ಬೆಳ್ಳಿತೆರೆ ಮೇಲೆ ಬನ್ನಂಜೆ ಗೋವಿಂದಾಚಾರ್ಯರ ಬಯೋಪಿಕ್
ಮುಂದಿನ ಮೂರು ತಿಂಗಳ ಒಳಗೆ ಒನ್ಟೈಮ್ ಸೆಟಲ್ಮೆಂಟ್ ಆಗಿ ನಾಗರತ್ನ ಅವರಿಗೆ ಜೀವಾಂಶ ನೀಡುವಂತೆ ಹಾಗೂ ಮೂರು ಮಕ್ಕಳ ಸಂಪೂರ್ಣ ಜವಾಬ್ದಾರಿಯನ್ನ ದುನಿಯಾ ವಿಜಯ್ ಅವರೇ ಹೊರುವಂತೆ ಕೋರ್ಟ್ ಆದೇಶಿಸಿದೆ.
ದುನಿಯಾ ವಿಜಯ್ ಮತ್ತು ನಾಗರತ್ನ ಅವರ ಕೌಟುಂಬಿಕ ಭಿನ್ನಾಭಿಪ್ರಾಯಗಳು ಈ ಹಿಂದೆ ಪೊಲೀಸ್ ಠಾಣೆ ಹಾಗೂ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದವು. ಈ ಹಿಂದೆ ಕೌಟುಂಬಿಕ ನ್ಯಾಯಾಲಯವು ವಿಚ್ಛೇದನ ಅರ್ಜಿಯನ್ನ ತಿರಸ್ಕರಿಸಿತ್ತು. ಕೌಟುಂಬಿಕ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ವಿಜಯ್ ಹೈಕೋರ್ಟ್ ಮೊರೆ ಹೋಗಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ದಂಪತಿಗಳು ಮತ್ತೆ ಒಂದಾಗಿ ಬಾಳಲು ಸಾಧ್ಯವಿಲ್ಲ ಎಂಬ ಅಂಶವನ್ನು ಗಮನಿಸಿ, ಷರತ್ತುಬದ್ಧ ವಿಚ್ಛೇದನ ನೀಡಿದೆ.ಇದನ್ನೂ ಓದಿ: ದರ್ಶನ್ ಬಿಟ್ಟು ಸುದೀಪ್ ಬೆನ್ನು ಹತ್ತಿದ ಪ್ರೇಮ್
