ಬೆಂಗಳೂರು: ಸೆ.21ರಿಂದ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ (Special Session) ನಡೆಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.
ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಶೇಷ ಅಧಿವೇಶನಕ್ಕೆ ಒಪ್ಪಿಗೆ ನೀಡಲಾಗಿದೆ. ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 23ರವರೆಗೆ ಒಟ್ಟು ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದೆ. ಇದನ್ನೂ ಓದಿ: ಕೆಎಂಎಫ್ ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿ – 14 ಸಾವಿರ ಲೀಟರ್ ಹಾಲು ರಸ್ತೆಪಾಲು
ಈ ಮೊದಲು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಹೋರಾಟ ಮುಂದುವರೆಸಿತ್ತು. ಅಲ್ಲದೇ ಅಹೋರಾತ್ರಿ ಧರಣಿಗೂ ಸಿದ್ಧತೆ ನಡೆಸಿತ್ತು. ಈ ಮಧ್ಯೆಯೇ ಮೂರು ದಿನ ಮೊದಲೇ ವಿಧಾನಮಂಡಲದ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದ್ದು, ಕಸ್ತೂರಿ ರಂಗನ್ ವರದಿ ಹಾಗೂ ಬರದ ಬಗ್ಗೆ ಚರ್ಚೆ ನಡೆಯಲಿದೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್
