ಅಮರಾವತಿ: 7 ತಿಂಗಳ ವಿರಾಮದ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಭೂತಪೂರ್ವ ಸಾಧನೆ ಮಾಡಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭೂ ವೀಕ್ಷಣಾ ಉಪಗ್ರಹ EOS-05 ಅನ್ನು ಹೊತ್ತ GSLV-F17 ರಾಕೆಟ್ ಶುಕ್ರವಾರ ನಸುಕಿನ ಜಾವ 2:55ರ ಸುಮಾರಿಗೆ ಬಾಹ್ಯಾಕಾಶ ನಿಲ್ದಾಣದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.
Yet another outstanding achievement by ISRO and a proud moment for our nation.
The successful launch of GSLV-F17 carrying EOS-05, India’s first-ever imaging satellite from Geosynchronous orbit is a reflection of the excellence, innovation and growing capabilities that define… https://t.co/fXzwnSmwAF
— Narendra Modi (@narendramodi) September 4, 2026
ಇಸ್ರೋದ ಈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. GSLV-F17 ಯಶಸ್ವಿ ಉಡಾವಣೆ ಇಸ್ರೋದ ಮತ್ತೊಂದು ಅತ್ಯುತ್ತಮ ಸಾಧನೆ ಮತ್ತು ನಮ್ಮ ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದ್ದಾರೆ.
ಜಿಯೋಸಿಂಕ್ರೋನಸ್ ಕಕ್ಷೆಯಿಂದ ಭಾರತದ ಮೊದಲ ಇಮೇಜಿಂಗ್ ಉಪಗ್ರಹವಾದ EOS-05 ಅನ್ನು ಹೊತ್ತ GSLV-F17 ನ ಯಶಸ್ವಿ ಉಡಾವಣೆಯು ಭಾರತದ ಬಾಹ್ಯಾಕಾಶ ವಲಯವನ್ನ ವ್ಯಾಖ್ಯಾನಿಸುವ ಶ್ರೇಷ್ಠತೆ, ನಾವೀನ್ಯತೆ ಮತ್ತು ಬೆಳೆಯುತ್ತಿರುವ ಸಾಮರ್ಥ್ಯಗಳ ಪ್ರತಿಬಿಂಬವಾಗಿದೆ. ಇಸ್ರೋ ಮತ್ತು ಭಾರತೀಯ ಉದ್ಯಮದ ನಡುವಿನ ಬೆಳೆಯುತ್ತಿರುವ ಪಾಲುದಾರಿಕೆಯು ನಮ್ಮ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಹೊಸ ಶಕ್ತಿ ಮತ್ತು ಪ್ರಮಾಣವನ್ನು ಸೇರಿಸುತ್ತಿದೆ. ಅಲ್ಲದೇ ಇಡೀ ಬಾಹ್ಯಾಕಾಶ ಪರಿಸರ ವ್ಯವಸ್ಥೆಯಾದ್ಯಂತ ಭಾರತದ ಸಾಮರ್ಥ್ಯಗಳನ್ನ ವಿಸ್ತರಿಸುತ್ತಿದೆ ಎಂದು ಕೊಂಡಾಡಿದ್ದಾರೆ.
Mission Success!
GSLV-F17 has successfully accomplished its mission, placing EOS-05 into the intended orbit.
Sharing a few memorable moments from the lift-off.
For more information:https://t.co/VneB2jgZoY#GSLVF17 #EOS05 #ISRO pic.twitter.com/kv0zB6V5Vi
— ISRO (@isro) September 3, 2026
ಇಸ್ರೋ ಭಾರತದ ಮೊಟ್ಟಮೊದಲ EOS-05 ಇಮೇಜಿಂಗ್ ಉಪಗ್ರಹವನ್ನ ಯಶಸ್ವಿಯಾಗಿ ಉಡಾಯಿಸಿದ ಸಾಧನೆ ಮಾಡಿದ್ದು, ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ 2ನೇ ಉಡಾವಣಾ ಪ್ಯಾಡ್ನಿಂದ ರಾಕೆಟ್ ಹಾರಿದೆ. ಭೂ ವೀಕ್ಷಣಾ ಸಾಟಲೈಟ್ (Geo Imaging Satellite) EOS-05 ಅನ್ನು ಸಬ್-ಜಿಯೋಸಿಂಕ್ರೋನಸ್ ವರ್ಗಾವಣೆ ಕಕ್ಷೆಗೆ ಯಶಸ್ವಿಯಾಗಿ ನಿಯೋಜನೆ ಮಾಡುವಲ್ಲಿ ಯಶಸ್ವಿಯಾಗಿದೆ.
