ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ ಉಡುಪಿ (Udupi) ಮೂಲದ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಬಂಧನ ಭೀತಿ ಹಿನ್ನಲೆ ನಿರೀಕ್ಷಣಾ ಜಾಮೀನಿಗೆ ಗೌರವ್ ಶೆಟ್ಟಿ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ವಿಚಾರಣೆ ನಡೆಸಿದ 59 ಸಿಸಿಹೆಚ್ ಕೋರ್ಟ್ (Court), ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಪ್ರದೋಷ್ ಮಾಫಿ ಸಾಕ್ಷ್ಯ ಹೇಳಿಕೆಗೆ ತಡೆ ಕೋರಿ ಅರ್ಜಿ; ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ
ಸಾಕ್ಷಿದಾರ ಸಂದೀಪ್ಗೆ ವಾಟ್ಸಪ್ ಕರೆ ಮೂಲಕ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಸುಹಾಸ್, ವೇಣು, ಪುನೀತ್ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಮುಖ ಆರೋಪಿ ಗೌರವ್ ಶೆಟ್ಟಿ ತಲೆಮರೆಸಿಕೊಂಡಿದ್ದ.
ಬಂಧಿತ ಆರೋಪಿಗಳ ವಿಚಾರಣೆ ಹಾಗೂ ಮೊಬೈಲ್ ಪರಿಶೀಲನೆ ವೇಳೆ ಗೌರವ್ ಶೆಟ್ಟಿ, ಕಿರಣ್ ರೆಡ್ಡಿ ಜೊತೆ ಕಾನ್ಫರೇನ್ಸ್ ಕರೆ ಮಾಡಿ ಸಾಕ್ಷಿಗೆ ಬೆದರಿಕೆ ಹಾಕಿದ್ದು ಗೊತ್ತಾಗಿತ್ತು. ಬಳಿಕ ಗೌರವ್ ಶೆಟ್ಟಿ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ.
ಇದೀಗ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿರುವ ಗೌರವ್ ಶೆಟ್ಟಿ, ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ – ಮಾಫಿ ಸಾಕ್ಷಿ ಕ್ರಮಕ್ಕೆ ಹೈಕೋರ್ಟ್ ಮೊರೆ ಹೋದ ದರ್ಶನ್
