ಕಲಬುರಗಿ: ಕೆಪಿಎಸ್ಸಿ ಪರೀಕ್ಷಾ ಅಕ್ರಮದಲ್ಲಿ (KPSC Scam) ಯಾರೇ ಭಾಗಿಯಾದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದರು.
ಇಲ್ಲಿನ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರು ಎಷ್ಟೇ ಬಲಿಷ್ಟವಾದರು, ಯಾವುದೇ ಪಕ್ಷದವರಾದರು ಸರಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ನ್ಯಾಯ ಕಲ್ಪಿಸಲು ಬದ್ಧ ಎಂದ ಅವರು, ತಾವೇ ರಾಜ್ಯದ ಗೃಹ ಸಚಿವರಿರುವಾಗ ಯಾವುದೇ ಸಾಕ್ಷಿ ದುರ್ಬಲಗೊಳಿಸಲು ಸಹ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: KPSC Scam | ದುಡ್ಡು ಕೊಟ್ಟ ದಡ್ಡ ಶಿಖಾಮಣಿಗಳಿಗೆ ದೇವನಹಳ್ಳಿ ಬಳಿಯ ರೆಸಾರ್ಟ್ನಲ್ಲಿ ಟ್ರೈನಿಂಗ್
ಹಿಂದೆ ನಾನು ವಿರೋಧ ಪಕ್ಷದಲ್ಲಿ ಇದ್ದಾಗ ಪರೀಕ್ಷಾ ಅಕ್ರಮ ತಡೆಯಲು ಖಾಸಗಿ ಬಿಲ್ ಮಂಡಿಸಿದೆ. ಇದೀಗ ನಮ್ಮ ಸರ್ಕಾರದ ಅವಧಿಯಲ್ಲಿಯೆ ಪರೀಕ್ಷಾ ಅಕ್ರಮ ತಡೆಯಲು ಬಿಲ್ ತರಲಾಗಿದೆ. 70 ಸಾವಿರ ಹುದ್ದೆ ಭರ್ತಿಗೆ ಚಾಲನೆ ನೀಡಿದ್ದು, 35 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇವರೆಲ್ಲರ ಹಿತ ಕಾಯುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು. ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ – ಯೆಲ್ಲೋ ಅಲರ್ಟ್ ಘೋಷಣೆ
ಜಿಲ್ಲೆಯ 5 ತಾಲೂಕು ಮಾತ್ರ ಬರ ಘೋಷಣೆ ಮಾಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಎನ್ಡಿಆರ್ಎಫ್ ನಿಯಮಾವಳಿ ಪ್ರಕಾರ ಬರ ಘೋಷಣೆ ಮಾಡಬೇಕಾಗುತ್ತದೆ. ನಿಯಾಮಾವಳಿ ರಚಿಸಿದ್ದು ಕೇಂದ್ರ ಸರ್ಕಾರ. ವಿರೋಧ ಪಕ್ಷದವರು ಕಲಬುರಗಿಯಲ್ಲಿ ಪ್ರತಿಭಟನೆ ಮಾಡುವುದರ ಬದಲಾಗಿ ಕೇಂದ್ರ ಸರ್ಕಾರದ ಮುಂದೆ ಹೀಗೆ ಪ್ರತಿಭಟಿಸಲಿ ಎಂದು ಹೇಳಿದರು. ಇದನ್ನೂ ಓದಿ: ಭಾರತದಲ್ಲಿ ಟ್ರಂಪ್ ನೀತಿಯನ್ನು ಟ್ರೋಲ್ ಮಾಡಿದ ಬೆಲ್ಜಿಯಂ ಪ್ರಧಾನಿ
ಕಾರಾಗೃಹ ಸುಧಾರಣೆ ವರದಿ ಸಲ್ಲಿಕೆ:
ಕರ್ನಾಟಕದ ಕಾರಾಗೃಹಗಳ (ಜೈಲುಗಳ) ಆಡಳಿತ, ಸುರಕ್ಷತೆ ಮತ್ತು ಸುಧಾರಣೆಗಳಿಗೆ ಸಂಬಂಧಿಸಿದಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಅವರ ನೇತೃತ್ವದಲ್ಲಿ ರಚಿಸಲಾದ ಉನ್ನತ ಮಟ್ಟದ ಸಮಿತಿಯೂ ಈಗಾಗಲೆ ವರದಿ ಸಲ್ಲಿಸಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಎಚ್ಚರಿಕೆ – ʻಮಹಾಕಾಳಿʼ ಸೇರುವ ಚೌಲಾನಿ ನದಿಗೆ ಭೂಕುಸಿತ
