– ಈ ಬಾರಿ ಕರ್ನಾಟಕದಿಂದ ಪ್ರಶಸ್ತಿ ಪಡೆದ ಏಕೈಕ ಶಿಕ್ಷಕಿ
ನವದೆಹಲಿ/ ಶಿವಮೊಗ್ಗ: ನವೀನ ತಂತ್ರಗಳ ಮೂಲಕ ಮಕ್ಕಳಿಗೆ ಪಾಠ ಮಾಡುವ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಎಸ್. ರತ್ನಾಕುಮಾರಿ (Rathnakumari S) ಅವರು ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರಿಂದ 2026ನೇ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು (National Teachers Award) ಸ್ವೀಕರಿಸಿದರು.

ಈ ಬಾರಿ ಕರ್ನಾಟಕದಿಂದ ಪ್ರಶಸ್ತಿ ಪಡೆದ ಏಕೈಕ ಶಿಕ್ಷಕಿ ಅವರಾಗಿದ್ದಾರೆ. ಶಿಕ್ಷಕಿಯ ವಿಶೇಷ ಪಾಠ ಮಾಡುವ ಕಲೆಗೆ ಈ ಬಾರಿ ಪ್ರಶಸ್ತಿ ಒಲಿದಿದೆ. ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕಿ ರತ್ನಾಕುಮಾರಿಯವರಿಗೆ ಸಹೋದ್ಯೋಗಿಗಳು ಹಾಗೂ ಊರಿನ ಗ್ರಾಮಸ್ಥರು ಅಭಿನಂದಿಸಿದ್ದಾರೆ.

