ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಪ್ರಾಧ್ಯಾಪಕರ ಮೇಲೆ ಕನಿಷ್ಟ 10 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.
ವಿಶ್ವವಿದ್ಯಾಲಯದ ಆಂತರಿಕ ದೂರು ಸಮಿತಿಗೆ (ICC) ವಿದ್ಯಾರ್ಥಿಗಳಿಂದ ದೂರು ಸಲ್ಲಿಕೆಯಾಗಿದೆ.
ವಿದ್ಯಾರ್ಥಿಗಳು ನೀಡಿದ ದೂರಿನಲ್ಲಿ, ಪ್ರೊಫೆಸರ್ ಮೀಟಿಂಗ್ ನೆಪದಲ್ಲಿ ತನ್ನ ಮನೆಗೆ ಕರೆಸಿಕೊಂಡು ಅನುಚಿತವಾಗಿ ವರ್ತಸಿದ್ದಾರೆ. ತರಗತಿ ವೇಳೆ ವಿದ್ಯಾರ್ಥಿನಿಯರಿಗೆ ಆಕ್ಷೇಪಾರ್ಹ ಕಾಮೆಂಟ್ಗಳನ್ನ ಸಹ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಐಸಿಸಿ ಒಂದು ತಿಂಗಳ ಹಿಂದೆ ದೂರು ಸ್ವೀಕರಿಸಿದ್ದು, ಅಂದಿನಿಂದ ಆರೋಪಗಳ ಕುರಿತು ತನಿಖೆ ಪ್ರಾರಂಭಿಸಿದೆ. ಸಮಿತಿಯು ಪ್ರಸ್ತುತ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದು, ವಿಚಾರಣೆಯ ಸಮಯದಲ್ಲಿ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳಿಂದಲೂ ಮಾಹಿತಿ ಸಂಗ್ರಹಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಕೋಟೆ ನಾಡಿನತ್ತ ಹರಿದ ಭದ್ರಾ ನೀರು – ಹಲವು ದಶಕಗಳ ಕನಸು ನನಸಾಗುವ ಕಾಲ ಸನ್ನಿಹಿತ
ಈ ವಿಷಯದಲ್ಲಿ ಯಾವುದೇ ಪೊಲೀಸ್ ದೂರು ದಾಖಲಾಗಿರುವ ಬಗ್ಗೆ ಇಲ್ಲಿಯವರೆಗೆ ಯಾವುದೇ ಮಾಹಿತಿ ಇಲ್ಲ. ಈ ಕುರಿತು JNU ಕುಲಪತಿಗಳು ಕೂಡ ಯಾವುದೇ ಹೇಳಿಕೆ ನೀಡಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: ʻಗೌರಿ ಲಂಕೇಶ್ʼ ಕೊಲೆ ಕೇಸ್ ಆರೋಪಿಯಿಂದ ಹುಬ್ಬಳ್ಳಿ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ
