ಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ (Gadag) ಜಿಲ್ಲೆ ಶಿರಹಟ್ಟಿ ತಾಲೂಕಿನ ಶಿವಾಜಿನಗರ ತಾಂಡಾದಲ್ಲಿ ನಡೆದಿದೆ.
ಸಂತೋಷ ಲಮಾಣಿ ಎಂಬುವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ. ಕುಟುಂಬಸ್ಥರೆಲ್ಲರೂ ಎರಡು ದಿನಗಳಿಂದ ಮನೆ ದೇವರಿಗೆ ತೆರಳಿದ್ದರು. ಆದರೆ, ಇಂದು ಬೆಳಗಿನ ಜಾವ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದರೆ, ಮನೆಯಲ್ಲಿದ್ದ ದವಸ ಧಾನ್ಯಗಳು, ಬಟ್ಟೆ, ಹಣ, ದಾಖಲೆಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಇನ್ನು ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರು ಸುಟ್ಟು ಕರಕಲಾದ ಮನೆಯನ್ನು ಕಂಡು ಕಣ್ಣೀರಿಟ್ಟಿದ್ದಾರೆ.ಇದನ್ನೂ ಓದಿ: ಹಾವೇರಿ | ವರದಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ; ಬ್ರಿಡ್ಜ್ ಕಂ ಬ್ಯಾರೇಜ್‌ಗಳಲ್ಲಿ ನೀರು ನಿಲ್ಲಿಸಲು ರೈತರ ಒತ್ತಾಯ
ಗದಗ ಜಿಲ್ಲೆಯ ಶಿರಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಹಾವೇರಿ | ಫುಡ್ ಪ್ರೊಸೆಸಿಂಗ್ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಆಹಾರ ಪದಾರ್ಥ ಸೀಜ್
